Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಬೆಳ್ಳೂಟಿ ಗೇಟ್ ಬಳಿಯಿರುವ ರಿಚ್ಮಂಡ್ ಫೆಲೋಶಿಪ್ ಸೊಸೈಟಿ ಹಾಗೂ ಬೆಂಗಳೂರಿನ ಎಂ.ಎಸ್.ರಾಮಯ್ಯ ವೈದ್ಯಕೀಯ ಕಾಲೇಜು ಆಸ್ಪತ್ರೆ ಸಹಯೋಗದಲ್ಲಿ ರಿಚ್ಮಂಡ್ ಫೆಲೋಶಿಪ್ ಸೊಸೈಟಿ ಆವರಣದಲ್ಲಿ ಆಯೋಜಿಸಲಾಗಿದ್ದ ಉಚಿತ ನೇತ್ರ ಚಿಕಿತ್ಸಾ ಶಿಬಿರದಲ್ಲಿ ರಿಚ್ಮಂಡ್ ಫೆಲೋಶಿಪ್ ಸೊಸೈಟಿ ಕಾರ್ಯದರ್ಶಿ ಎನ್.ಕೆ.ಗುರುರಾಜರಾವ್ ಮಾತನಾಡಿದರು.
ತಾಲ್ಲೂಕಿನ ಗ್ರಾಮೀಣ ಭಾಗದ ಹಾಗೂ ಬಡ ಜನರಿಗೆ ಉತ್ತಮ ವೈದ್ಯಕೀಯ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಉಚಿತ ಆರೋಗ್ಯ ಶಿಬಿರವನ್ನು ಆಯೋಜಿಸಿದ್ದು, ಶಿಬಿರದಲ್ಲಿ ಪಾಲ್ಗೊಂಡು ಕಣ್ಣಿನ ತಪಾಸಣೆ ನಡೆಸಿ ಶಸ್ತ್ರಚಿಕಿತ್ಸೆ ಅಗತ್ಯವಿರುವವರನ್ನು ಬೆಂಗಳೂರಿನ ಎಂ.ಎಸ್.ರಾಮಯ್ಯ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ವಾಹನದಲ್ಲಿ ಕರೆದೊಯ್ದು ಉಚಿತವಾಗಿ ಶಸ್ತ್ರಚಿಕಿತ್ಸೆ ಮಾಡಿಸಲಾಗುವುದು. ಶಸ್ತ್ರಚಿಕಿತ್ಸೆ ನಂತರ ಉಚಿತವಾಗಿ ಔಷದೋಪಚಾರ ಹಾಗೂ ಕಪ್ಪು ಕನ್ನಡಕವನ್ನು ನೀಡಿ ವಾಪಸ್ ಹಿಂದಿರುಗಲು ವಾಹನ ಸೌಲಭ್ಯ ಒದಗಿಸಲಾಗಿದೆ. ಆಸ್ಪತ್ರೆಗೆ ದಾಖಲಾಗುವವರಿಗೆ ಉಚಿತ ಊಟದ ವ್ಯವಸ್ಥೆ ಸಹ ಮಾಡಲಾಗಿದೆ ಎಂದರು.
ಸುಮಾರು 120 ಕ್ಕೂ ಹೆಚ್ಚು ಮಂದಿ ಗ್ರಾಮಸ್ಥರು ಕಣ್ಣಿನ ತಪಾಸಣೆ ಮಾಡಿಸಿಕೊಂಡರು. ಕಣ್ಣಿನ ಡ್ರಾಪ್ಸ್, ಅಗತ್ಯವಿರುವವರಿಗೆ ಉಚಿತವಾಗಿ ನೀಡಲಾಯಿತು. ಸುಮಾರು 20 ಮಂದಿ ಕಣ್ಣಿನ ಶಸ್ತçಚಿಕಿತ್ಸೆಯ ಅಗತ್ಯವಿರುವವರನ್ನು ಬೆಂಗಳೂರಿಗೆ ಕರೆದೊಯ್ಯಲಾಯಿತು.
ರಿಚ್ಮಂಡ್ ಫೆಲೋಶಿಪ್ ಸೊಸೈಟಿ ಪದಾಧಿಕಾರಿಗಳು ಸೇರಿದಂತೆ ರಾಮಯ್ಯ ವೈದ್ಯಕೀಯ ಕಾಲೇಜು ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ ಶಿಬಿರದಲ್ಲಿ ಭಾಗವಹಿಸಿದ್ದರು.
For Daily Updates WhatsApp ‘HI’ to 7406303366
Follow Chikkaballapur District News
Facebook: https://www.facebook.com/hicbpur
Twitter: https://twitter.com/hicbpur