25.8 C
Bengaluru
Monday, October 28, 2024

ಉಚಿತ ಆರೋಗ್ಯ ಶಿಬಿರ

- Advertisement -
- Advertisement -

Sidlaghatta : ಶಿಡ್ಲಘಟ್ಟ ನಗರದ ಕೋಟೆ ವೃತ್ತದಲ್ಲಿರುವ (Kote Circle) ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಆವರಣದಲ್ಲಿ ನಗರದ ಸಾರ್ವಜನಿಕ ಆಸ್ಪತ್ರೆ ಹಾಗೂ ಹೊಸಕೋಟೆ MVJ Hospital ಸಂಯುಕ್ತಾಶ್ರಯದಲ್ಲಿ ಮಂಗಳವಾರ ತಾಲ್ಲೂಕಿನ ಸರ್ಕಾರಿ ಶಾಲೆಗಳ ಶಿಕ್ಷಕಿಯರು ಸೇರಿದಂತೆ ಬಿಸಿಯೂಟದ ಅಡುಗೆ ಸಿಬ್ಬಂದಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ (Free Health Camp) ಭಾಗವಹಿಸಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿಕ್ಷಣ ಸಂಯೋಜಕ ಭಾಸ್ಕರ್‌ಗೌಡ ಮಾತನಾಡಿದರು.

ಕೆಲಸದ ಒತ್ತಡದ ನಡುವೆ ಅನೇಕ ಶಿಕ್ಷಕಿಯರು ವಿವಿಧ ರೀತಿಯ ಆರೋಗ್ಯ ಸಮಸ್ಯೆಗಳಿಂದ ತೊಂದರೆ ಅನುಭವಿಸುತ್ತಿದ್ದು, ಸಕಾಲದಲ್ಲಿ ಆರೋಗ್ಯವನ್ನು ಸುಧಾರಿಸಿಕೊಳ್ಳದೆ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಹಾಗಾಗಿ ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯ ಸಿಗಬೇಕು ಎನ್ನುವ ಉದ್ದೇಶದಿಂದ ಸರ್ಕಾರದ ಆದೇಶದ ಮೇರೆಗೆ ಇಂದು ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಂಡಿದ್ದು ಪ್ರತಿಯೊಬ್ಬರೂ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ನಗರ ಸೇರಿದಂತೆ ತಾಲ್ಲೂಕಿನ ಎಲ್ಲಾ ಸರ್ಕಾರಿ ಶಾಲೆಗಳ ಶಿಕ್ಷಕಿಯರು ಮತ್ತು ಅಡುಗೆ ಸಿಬ್ಬಂದಿಗೆ ಉಚಿತವಾಗಿ ಆರೋಗ್ಯ ತಪಾಸಣಾ ನಡೆಸಲಾಯಿತು.

ಶಿಬಿರದಲ್ಲಿ ಪ್ರಸೂತಿ ಮತ್ತು ಸ್ತ್ರೀರೋಗ, ಕಣ್ಣು, ಮಧುಮೇಹ, ರಕ್ತದೊತ್ತಡ , ಚರ್ಮದ ಖಾಯಿಲೆ ಸೇರಿದಂತೆ ಸಾಮಾನ್ಯ ಆರೋಗ್ಯ ತಪಾಸಣೆಗಳನ್ನು ಎಂವಿಜೆ ಆಸ್ಪತ್ರೆಯ ವೈದ್ಯರು ಮಾಡಿದರು.

ಈ ಸಂದರ್ಭದಲ್ಲಿ ನಗರದ ಸಾರ್ವಜನಿಕ ಆಸ್ಪತ್ರೆಯ ಆರೋಗ್ಯ ನಿರೀಕ್ಷಣ ಅಧಿಕಾರಿ ಲೋಕೇಶ್, ಸಿಬ್ಬಂದಿ ಅಲವೇಲು ಮಂಗಮ್ಮ, ಶಶಿಕಲಾ, ಯಶೋದಮ್ಮ, ಡಾ.ಯಶ್ವಂತ್, ಮುಖ್ಯ ಶಿಕ್ಷಕ ಬಿ. ವೆಂಕಟೇಶ್, ಶಿಕ್ಷಕರಾದ ಮುನಿರಾಜು, ಮಂಜುನಾಥ್, ಚಂದ್ರಶೇಖರ್ ಹಾಜರಿದ್ದರು.

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶
https://www.youtube.com/c/sidlaghatta

Website 🌐
http://www.sidlaghatta.com

📱 Join Telegram
https://t.me/Sidlaghatta

- Advertisement -
Latest news
- Advertisement -
Related news
- Advertisement -
error: Content is protected !!