Sidlaghatta : ಶಿಡ್ಲಘಟ್ಟ ನಗರದ ವಾಸವಿ ವಿದ್ಯಾಸಂಸ್ಥೆಯ (Vasavi vidya Samsthe) ಆವರಣದಲ್ಲಿ ಶನಿವಾರ ಆಯೋಜಿಸಿದ್ದ ಹಸಿರು ದಿನಾಚರಣೆ ಕಾರ್ಯಕ್ರಮದಲ್ಲಿ (Green Day Programme) ಬಾಗವಹಿಸಿ ನಗರಸಭೆ ಪೌರಾಯುಕ್ತ ಆರ್.ಶ್ರೀಕಾಂತ್ ಅವರು ಮಾತನಾಡಿದರು.
ಪರಿಸರ ಮನುಷ್ಯನ ಅವಿಭಾಜ್ಯ ಅಂಗ. ಪರಿಸರವಿಲ್ಲದೆ ನಾವು ಬದುಕಲು ಸಾಧ್ಯವಿಲ್ಲ. ಶುದ್ಧ ಗಾಳಿ, ನೆರಳು ನೀಡುವ ಪರಿಸರದಲ್ಲಿ ಶ್ವಾಸಕೋಶದಂತೆ ವರ್ತಿಸುವ ವೃಕ್ಷಗಳು ನಮಗೆ ಅಗತ್ಯ. ಆದ್ದರಿಂದ ನಾವು ವೃಕ್ಷ ರಕ್ಷಣೆಯ ತೀರ್ಮಾನಗಳನ್ನು ಕೈಗೊಳ್ಳಬೇಕು ಎಂದು ಅವರು ಹೇಳಿದರು.
ಜೀವ ಸಂಕುಲಕ್ಕೆ ಬದುಕಲು ಅತ್ಯಾವಶ್ಯಕವಾಗಿ ಬೇಕಾಗಿರುವ ಆಮ್ಲಜನಕ ಪರಿಸರದಲ್ಲಿ ವೃದ್ಧಿಯಾಗಲು ಪ್ರತಿಯೊಬ್ಬರು ಸಸಿ ನೆಟ್ಟು ನೀರೆರೆದು ಬೆಳೆಸಬೇಕು. ಪ್ಲಾಸ್ಟಿಕ್ ಬಳಕೆಯಿಂದ ಮತ್ತಷ್ಟು ಅನಾಹುತಗಳಾಗುವುದನ್ನು ತಪ್ಪಿಸುವ ಉದ್ದೇಶದಿಂದ ಪ್ಲಾಸ್ಟಿಕ್ ಬಳಕೆ ಮಾಡುವುದನ್ನು ಪ್ರತಿಯೊಬ್ಬರೂ ನಿಲ್ಲಿಸಬೇಕು ಎಂದು ಸೂಚಿಸಿದರು.
ನಗರಸಭೆ ಅಧ್ಯಕ್ಷೆ ಸುಮಿತ್ರಾರಮೇಶ್ ಮಾತನಾಡಿ ಮಕ್ಕಳಿಗೆ ಪರಿಸರದ ಬಗ್ಗೆ ಅರಿವು ಮೂಡಿಸುತ್ತಿರುವ ಕಾರ್ಯ ಶ್ಲಾಘನೀಯ, ಶಾಲೆಯ ಆವರಣದಲ್ಲಿ ಮಕ್ಕಳಿಂದಲೇ ಗಿಡಗಳನ್ನು ನೆಡಿಸುವ ಮೂಲಕ ಸಂರಕ್ಷಣೆ ಕಾರ್ಯ ಆಗಬೇಕೆಂದರು.
ವಾಸವಿ ವಿದ್ಯಾಸಂಸ್ಥೆಯ ಅದ್ಯಕ್ಷ ಟಿ.ಎ.ಕೃಷ್ಣಯ್ಯಶೆಟ್ಟಿ ವಾಸವಿ ಮಹಿಳಾ ಮಂಡಳಿ ಅಧ್ಯಕ್ಷೆ ಗಜಲಕ್ಷ್ಮಿ, ವಾಸವಿ ಯವಜನ ಸಂಘದ ಅಧ್ಯಕ್ಷ ಕೇದಾರನಾಥ್, ಸಂಸ್ಥೆಯ ಕಾರ್ಯದರ್ಶಿ ರೂಪಸಿರಮೇಶ್, ಮುಖ್ಯಶಿಕ್ಷಕ ಶಿವಕುಮಾರ್, ಸೇರಿದಂತೆ ಶಿಕ್ಷಕರು, ಸಿಬ್ಬಂದಿ ಹಾಜರಿದ್ದರು.