Saturday, September 24, 2022
HomeSidlaghattaಹಂಡಿಗನಾಳ, ಬೊಮ್ಮನಹಳ್ಳಿ ಗೇಟ್ ಬಳಿ ಅಪಘಾತ

ಹಂಡಿಗನಾಳ, ಬೊಮ್ಮನಹಳ್ಳಿ ಗೇಟ್ ಬಳಿ ಅಪಘಾತ

- Advertisement -

ಅಪರಿಚಿತ ವಾಹನ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು

- Advertisement -
- Advertisement -
- Advertisement -

Sidlaghatta : ಶಿಡ್ಲಘಟ್ಟ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 234 ರ ಬೊಮ್ಮನಹಳ್ಳಿ ಗೇಟ್ ಸಮೀಪ ಭಾನುವಾರ ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿರುವ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಬೊಮ್ಮ ನಹಳ್ಳಿ – ಸೋಣ್ಣೇನಹಳ್ಳಿ ಗ್ರಾಮಗಳ ಮಾರ್ಗ ಮಧ್ಯೆ ಇರುವ ಮೋರಿ ಬಳಿ ಭೀಕರ ಅಪಘಾತವಾಗಿದ್ದು, ಅಪಘಾತ ರಭಸಕ್ಕೆ ಬೈಕ್ ನಲ್ಲಿ ಹೋಗುತ್ತಿದ್ದ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೈಕ್ ಸಂಪೂರ್ಣ ಜಖಂಗೊಂಡಿದ್ದು, ರಸ್ತೆಯ ಪಕ್ಕದ ಗಿಡಗಳಲ್ಲಿ ಬಿದ್ದಿದೆ.

ಅಪಘಾತದಲ್ಲಿ ಮೃತಪಟ್ಟಿರುವ ಯುವಕ ಚಿಕ್ಕಬಳ್ಳಾಪುರದ ನಿವಾಸಿ, ಚೇತನ್ ಕೆ.ಎಸ್. ಎಜುಕೇಶನ್ ಇವೆಂಟ್ ಭಾಗವಾಗಿ ವಿದ್ಯಾರ್ಥಿಗಳಿಗೆ ಮೊಬೈಲ್ ತಂತ್ರಜ್ಞಾನದ ಬಗ್ಗೆ ಪ್ರವಚನ ಹೇಳಲು ತಾಲ್ಲೂಕಿನ ಪಿಂಡಿಪಾಪನಹಳ್ಳಿ ಬಳಿ ಇರುವ ಬೃಂದಾ ಪಬ್ಲಿಕ್ ಸ್ಕೂಲ್ ಬಂದಿದ್ದರೆಂದು ತಿಳಿದು ಬಂದಿದೆ.

ಶಿಡ್ಲಘಟ್ಟ ಗ್ರಾಮಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ದ್ವಿಚಕ್ರ ವಾಹನಕ್ಕೆ ಅಪರಿಚಿತ ವಾಹನ ಡಿಕ್ಕಿ, ನಾಲ್ಕು ಜನರಿಗೆ ಗಾಯ

Sidlaghatta : ಬೈಕಿಗೆ ಅಪರಿಚಿತ ಕಾರು ಡಿಕ್ಕಿ ಹೊಡೆದಿರುವ ಪರಿಣಾಮ ನಾಲ್ಕು ಜನರು ಗಂಭೀರ ಗಾಯಗೊಂಡಿರುವ ಘಟನೆ ನಗರದ ಹೊರವಲಯದ ಹಂಡಿಗನಾಳ ಬಳಿ ನಡೆದಿದೆ.

ತಾಲ್ಲೂಕಿನ ಎ. ಹುಣಸೇನಹಳ್ಳಿಯ ಗ್ರಾಮದ ಮುನಿರಾಜು ಎಂಬಾತ ತನ್ನ ಪತ್ನಿ ಮತ್ತು ಮಕ್ಕಳೊಂದಿಗೆ ಬೈಕ್ ನಲ್ಲಿ ಚಿಕ್ಕಬಳ್ಳಾಪುರ ಕಡೆಯಿಂದ ಶಿಡ್ಲಘಟ್ಟ ಕಡೆಗೆ ಬರುವಾಗ ಎದುರುಗಡೆಯಿಂದ ಬಂದ ಕಾರು ಡಿಕ್ಕಿ ಪಡೆದಿದ್ದು ಅಪಘಾತವಾಗಿದೆ ಎನ್ನಲಾಗಿದೆ.

ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ನಲ್ಲಿದ್ದ ಮುನಿರಾಜು ಗಂಭೀರ ಗಾಯಗೊಂಡಿದ್ದು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಮುನಿರಾಜು ರವರ ಪತ್ನಿ ನಯನ, ಮಕ್ಕಳಾದ ನಿಕಿಲ್, ನಿಹಾಗ್ ಎಂಬುವರಿಗೆ ಗಾಯಗಳಾಗಿದ್ದು ಶಿಡ್ಲಘಟ್ಟ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತವಾದ ಕೂಡಲೇ ಕಾರು ನಿಲ್ಲಿಸದೆ ಕಾರು ಸಹಿತ ಚಾಲಕ ಪರಾರಿಯಾಗಿದ್ದಾನೆ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ. ಅಂಬ್ಯೂಲೆನ್ಸ್ ಗೆ ಪೋನ್ ಮಾಡಿದರೂ ಅರ್ದಗಂಟೆ ತಡವಾಗಿ ಬಂದಿತೆಂದು ತಿಳಿಸಿದ್ದಾರೆ. ಮುನಿರಾಜು ಅವರು ಶಿಡ್ಲಘಟ್ಟದ ಡಾಲ್ಫಿನ್ ಶಾಲೆಯಲ್ಲಿ ಶಾಲಾ ವಾಹನದ ಚಾಲಕನಾಗಿ ಕೆಲಸ ನಿರ್ವಹಿಸುತ್ತಿದ್ದರು.

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶
https://www.youtube.com/c/sidlaghatta

Website 🌐
http://www.sidlaghatta.com

📱 Join Telegram
https://t.me/Sidlaghatta

0.00 avg. rating (0% score) - 0 votes
- Advertisement -
RELATED ARTICLES
- Advertisment -

Most Popular

error: Content is protected !!