Thursday, March 28, 2024
HomeSidlaghatta“ಹರ್ ಘರ್ ತಿರಂಗ” ಅಭಿಯಾನಕ್ಕೆ ರಾಷ್ಟ್ರಧ್ವಜ ತಯಾರಿ

“ಹರ್ ಘರ್ ತಿರಂಗ” ಅಭಿಯಾನಕ್ಕೆ ರಾಷ್ಟ್ರಧ್ವಜ ತಯಾರಿ

- Advertisement -
- Advertisement -
- Advertisement -
- Advertisement -

Hosapete, Sidlaghatta : 75 ನೇ ವರ್ಷದ ಸ್ವಾತಂತ್ರ್ಯ ದ ಅಮೃತ ಮಹೋತ್ಸವದ ಅಂಗವಾಗಿ “ಹರ್ ಘರ್ ತಿರಂಗ” (Har Ghar Tiranga) ಅಭಿಯಾನವನ್ನು ಯಶಸ್ವಿಗೊಳಿಸಲು ತಾಲ್ಲೂಕು ಪಂಚಾಯತಿ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ.

ಶಿಡ್ಲಘಟ್ಟ ತಾಲ್ಲೂಕಿನ 28 ಗ್ರಾಮ ಪಂಚಾಯತಿಗಳಿಗೆ, ಸರ್ಕಾರ ಅನುಮತಿಸಿದ ಪಾಲಿಸ್ಟರ್ ಬಟ್ಟೆಯಲ್ಲಿ ಸಿದ್ಧಪಡಿಸಲು ಸೂಚನೆ ನೀಡಿ ತಾಲ್ಲೂಕಿನ ಹೊಸಪೇಟೆ ಗ್ರಾಮ ಪಂಚಾಯತಿಯ ಲಕ್ಷ್ಮಿ ಸಂಜೀವಿನಿ ಒಕ್ಕೂಟಕ್ಕೆ ಜವಾಬ್ದಾರಿಯನ್ನು ನೀಡಲಾಗಿದೆ.

ತಾಲ್ಲೂಕಿನಲ್ಲಿ 12,600 ರಾಷ್ಟ್ರ ಧ್ವಜಗಳನ್ನು ತಯಾರುಮಾಡಲು ನಿರ್ದೆಶನ ನೀಡಿ ಅದಕ್ಕೆ ಪೂರಕವಾಗಿ ಅಗತ್ಯವಿರುವ ಸಾಮಾಗ್ರಿಗಳನ್ನು ಖರೀದಿಸಲಾಗಿದೆ ಆಗಷ್ಟ್ 10 ರೊಳಗೆ ರಾಷ್ಟ್ರ ಧ್ವಜಗಳನ್ನು 20 * 30 ಅಳತೆಯ ಧ್ವಜಗಳನ್ನು ತಯಾರುಮಾಡಲು ತಾಕೀತು ಮಾಡಲಾಗಿದ್ದು, ಅದರಂತೆಯ ಲಕ್ಷ್ಮೀ ಸಂಜಿವೀನಿ ಒಕ್ಕೂಟದ ಸುಮಾರು 14 ಜನ ಮಹಿಳಾ ಸ್ವ- ಸಹಾಯ ಸಂಘದ ಸದಸ್ಯರ ಸಹಕಾರದೊಂದಿಗೆ ರಾಷ್ಟ್ರ ಧ್ವಜವನ್ನು ತಯಾರಿಸುವ ಕಾರ್ಯ ಪ್ರಗತಿಯಲ್ಲಿದೆ.

ಆಗಷ್ಟ್ 13 ರಿಂದ 15 ರವರೆಗೆ ಪ್ರತಿ ಮನೆಯ ಮೇಲೆ ರಾಷ್ಟ್ರ ಧ್ವಜಾರೋಹಣಕ್ಕೆ ಸಿದ್ಧತೆ ಮಾಡಿಕೊಳ್ಳುವ ಜೊತೆಗೆ ಅಭಿಯಾನವನ್ನು ಯಶಸ್ವಿಗೊಳಿಸಲು ಸರ್ಕಾರ ಸೂಚನೆ ನೀಡಿದ ಹಿನ್ನೆಲೆಯಲ್ಲಿ ತಾಲ್ಲೂಕು ಪಂಚಾಯತಿಯ ಕಾರ್ಯನಿರ್ವಹಣಾಧಿಕಾರಿ ಮುನಿರಾಜುರವರು ಎಲ್ಲಾ ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿ “ಹರ್ ಘರ್ ತಿರಂಗ” ಅಭಿಯಾನವನ್ನು ಯಶಸ್ವಿಗೊಳಿಸಲು ಮುಂದಾಗಿದ್ದಾರೆ.

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶
https://www.youtube.com/c/sidlaghatta

Website 🌐
http://www.sidlaghatta.com

📱 Join Telegram
https://t.me/Sidlaghatta

- Advertisement -
RELATED ARTICLES
- Advertisment -

Most Popular

error: Content is protected !!