Home Sidlaghatta ಬೃಹತ್ ಆರೋಗ್ಯ ತಪಾಸಣಾ ಶಿಬಿರ

ಬೃಹತ್ ಆರೋಗ್ಯ ತಪಾಸಣಾ ಶಿಬಿರ

0
107

Sidlaghatta : ನವೆಂಬರ್ 24 ಭಾನುವಾರ ಮತ್ತು ಡಿಸೆಂಬರ್ 5 ಗುರುವಾರ ನಗರದ ರೈಲ್ವೆ ನಿಲ್ದಾಣದ ಶ್ರೀ ಭುವನೇಶ್ವರಿ ವೃತ್ತದಲ್ಲಿ ಲಿಯೋ ಕ್ಲಬ್ ಆಫ್ ಕಿರಣ ಹಾಗೂ MVJ ಮೆಡಿಕಲ್ ಕಾಲೇಜು ಸಹಯೋಗದಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ. ಸಾರ್ವಜನಿಕರು ಈ ಶಿಬಿರದ ಸದುಪಯೋಗವನ್ನು ಪಡೆಯುವಂತೆ ಲಿಯೋ ಕ್ಲಬ್ ಆಫ್ ಕಿರಣ ಅಧ್ಯಕ್ಷ ಶ್ರೀಕಾಂತ್ ಮನವಿ ಮಾಡಿದರು.

ನಗರದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಲಿಯೋ ಕ್ಲಬ್ ಆಫ್ ಕಿರಣ ಸಂಸ್ಥೆ ಕಳೆದ ಮೂರು ವರ್ಷಗಳಿಂದ ತಾಲ್ಲೂಕಿನಲ್ಲಿ ಹಲವಾರು ಸಾಮಾಜಿಕ ಕಾರ್ಯಗಳನ್ನು ಮಾಡುತ್ತಿದ್ದು, ಈ ಶಿಬಿರವು ಸಾರ್ವಜನಿಕರಿಗೆ ಆರೋಗ್ಯ ತಪಾಸಣೆಗೆ ಸೌಕರ್ಯ ಒದಗಿಸಲು ಅನುವಾಗಿ ಮಾಡುವ ಉದ್ದೇಶ ಹೊಂದಿದೆ ಎಂದು ಹೇಳಿದರು.

ಕಾರ್ಯದರ್ಶಿ ಲೋಕೇಶ್ ಶಿಬಿರದ ವಿವರಗಳನ್ನು ನೀಡುತ್ತಾ, ಕಣ್ಣು, ಮೂಳೆ, ಚರ್ಮ, ಮಕ್ಕಳ ತಜ್ಞರು ಹಾಗೂ ಸ್ತ್ರೀ ರೋಗ ತಜ್ಞರು ಭಾಗವಹಿಸುವರು. ತಜ್ಞ ವೈದ್ಯರ ಇಡೀ ತಂಡ ಶಿಬಿರದಲ್ಲಿ ಭಾಗಿಯಾಗುತ್ತಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ತಮ್ಮ ಆರೋಗ್ಯ ಪರೀಕ್ಷೆ ಮಾಡಿಸಿಕೊಳ್ಳಲು ಕರೆ ನೀಡಿದರು.

ಈ ಸಂದರ್ಭದಲ್ಲಿ ಲಿಯೋ ಕ್ಲಬ್ ಆಫ್ ಕಿರಣದ ಪದಾಧಿಕಾರಿಗಳಾದ ದುರ್ಗಾಪ್ರಸಾದ್, ಅಕ್ಷಿತ್ ಉಪಸ್ಥಿತರಿದ್ದರು.

For Daily Updates WhatsApp ‘HI’ to 7406303366

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!