Home Sidlaghatta ಉಚಿತ ಆರೋಗ್ಯ ತಪಾಸಣಾ ಶಿಬಿರ

ಉಚಿತ ಆರೋಗ್ಯ ತಪಾಸಣಾ ಶಿಬಿರ

0

ಶಿಡ್ಲಘಟ್ಟ ನಗರದ ಕೋಟೆ ವೃತ್ತದ ಸರ್ಕಾರಿ ಬಾಲಕಿಯರ ಶಾಲೆ ಆವರಣದಲ್ಲಿ ಭಾನುವಾರ ಸುವರ್ಣ ಕರ್ನಾಟಕ ಜನಶಕ್ತಿ ವೇದಿಕೆ ಮತ್ತು ಕೊರೊನ ರೆಮಿಡೀಸ್ ಪ್ರೈವೇಟ್ ಲಿಮಿಟೆಡ್ ಇವರ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಉಚಿತ ಆರೋಗ್ಯ ತಪಾಸಣಾ ಶಿಭಿರದಲ್ಲಿ ಭಾಗವಹಿಸಿ ಮಲ್ಲಿಗೆ ಆಸ್ಪತ್ರೆಯ ಡಾ.ಯುವರಾಜ್ ಪ್ರಕಾಶ್ ಅವರು ಮಾತನಾಡಿದರು.

 ಉತ್ತಮ ಚಿಕಿತ್ಸೆಗಾಗಿ ಬಹುದೂರ ಹೋಗಬೇಕು. ಅದರಲ್ಲೂ ವಯಸ್ಕರಿಗೆ ಹಲವಾರು ಸಮಸ್ಯೆಗಳಿರುತ್ತವೆ. ಇತ್ತೀಚೆಗೆ ವೈದ್ಯಕೀಯ ಚಿಕಿತ್ಸೆ ಅತ್ಯಂತ ದುಬಾರಿಯಾಗಿದ್ದು ಬಡಜನತೆಗೆ ಉಪಯುಕ್ತವಾಗಲಿ ಮತ್ತು ಅವರ ಆರೋಗ್ಯ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲೆಂದು ತಜ್ಞ ವೈದ್ಯರ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಿದ್ದು, ಹಲವಾರು ಮಂದಿ ತಜ್ಞ ವೈದ್ಯರು ಆಗಮಿಸಿದ್ದು ಶಿಭಿರದಲ್ಲಿ ತಪಾಸಣೆ ನಡೆಸಲಿದ್ದಾರೆ. ಜನರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

 ಈ ಸಂದರ್ಭದಲ್ಲಿ ಹೃದಯ ಸಂಬಂಧಿ ಕಾಯಿಲೆ, ಸಕ್ಕರೆ ಕಾಯಿಲೆ, ರಕ್ತದ ಒತ್ತಡ, ಅಸ್ತಮಾ, ಥೈರಾಯ್ಡ್, ಮೂತ್ರಪಿಂಡ ರೋಗ ಇನ್ನೂ ಹಲವಾರು ಕಾಯಿಲೆಗಳಿಗೆ ಸಂಬಂಧಿಸಿದಂತೆ ಉಚಿತ ತಪಾಸಣೆ ಮಾಡಲಾಯಿತು. ನೂರಾರು ಮಂದಿ ಶಿಬಿರದಲ್ಲಿ ಪಾಲ್ಗೊಂಡು ಆರೋಗ್ಯ ತಪಾಸಣೆ ಮಾಡಿಸಿಕೊಂಡರು.

 ಇನ್ನೂ ಇದೇ ವೇಳೆ ನಗರ ಸಭೆ ಅಧ್ಯಕ್ಷೆ ಸಿ.ಎಂ.ಸುಮಿತ್ರಾ ರಮೇಶ್ ಮಾತನಾಡಿ, ನಗರದ ಜನತೆಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಉಚಿತ ಆರೋಗ್ಯ ಶಿಬಿರಗಳನ್ನು ಆಯೋಜಿಸಿರುವ ಸುವರ್ಣ ಕರ್ನಾಟಕ ಜನಶಕ್ತಿ ವೇದಿಕೆಯ ಕಾರ್ಯ ಶ್ಲಾಘನೀಯ ಹಾಗೂ ಇದರ ಸದುಪಯೋಗವನ್ನು ನಗರದ ಎಲ್ಲಾ ಜನತೆ ಪಡೆದುಕೊಳ್ಳಬೇಕು ಎಂದರು.

 ಕೊರೊನ ರೆಮಿಡೀಸ್ ಪ್ರೈವೇಟ್ ಲಿಮಿಟೆಡ್‌ನ ಗಂಗಾಧರ್, ಮುರಳಿ, ಸುವರ್ಣ ಕರ್ನಾಟಕ ಜನಶಕ್ತಿ ವೇದಿಕೆಯ ಜಿಲ್ಲಾಧ್ಯಕ್ಷ ಬೈರಾರೆಡ್ಡಿ. ಜಿಲ್ಲಾ ಉಪಾಧ್ಯಕ್ಷ ಆರ್.ಸುರೇಶ್‌ಭಗತ್, ಜಿಲ್ಲಾ ಸಂಚಾಲಕ ಕೆ.ನರೇಶ್, ತಾಲ್ಲೂಕು ಅಧ್ಯಕ್ಷ ಮಂಜುನಾಥ್, ನಗರ ಘಟಕದ ಅಧ್ಯಕ್ಷ ಜೆ.ಮಧುಕುಮಾರ್ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ತಾಲ್ಲೂಕು ಅಧ್ಯಕ್ಷ ರಾಮಾಂಜಿನಪ್ಪ ಹಾಜರಿದ್ದರು.

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook
http://www.facebook.com/sidlaghatta

Instagram
http://www.instagram.com/sidlaghatta

Youtube
https://www.youtube.com/c/sidlaghatta

Website
http://www.sidlaghatta.com

Join Telegram
https://t.me/Sidlaghatta

error: Content is protected !!
Exit mobile version