Friday, April 19, 2024
HomeSidlaghattaವಿಶ್ವ ಯೋಗ ದಿನಾಚರಣೆ

ವಿಶ್ವ ಯೋಗ ದಿನಾಚರಣೆ

- Advertisement -
- Advertisement -
- Advertisement -
- Advertisement -

Sidlaghatta : ಶಿಡ್ಲಘಟ್ಟದ ಕೋಟೆ ವೃತ್ತದಲ್ಲಿ ಮಂಗಳವಾರ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಆಶ್ರಯದಲ್ಲಿ ನಡೆದ 8 ನೇ ವಿಶ್ವ ಯೋಗ ದಿನಾಚರಣೆ (International Yoga Day) ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ನಗರಸಭಾ ಸದಸ್ಯೆ ಚಿತ್ರ ಮನೋಹರ್, ಜೀವನ ಪರ್ಯಂತ ಆರೋಗ್ಯಕರ ಜೀವನ ನಡೆಸಲು ಯೋಗ ಅತ್ಯವಶ್ಯಕವಾಗಿದೆ, ಇಡೀ ವಿಶ್ವದ ಜನರ ಆರೋಗ್ಯಕ್ಕೆ ಯೋಗ ಶಿಕ್ಷಣ ಸಂಸ್ಥೆಗಳು ಅಹರ್ನಿಶಿ ಕಾರ್ಯ ಮಾಡುತ್ತಿವೆ. ಸಮಾಜದ ಕಟ್ಡ ಕಡೆಯ ವ್ಯಕ್ತಿಗೂ ಯೋಗದ ಫಲ ಸಿಗಬೇಕಾದ ಅವಶ್ಯಕತೆ ಇದೆ ಎಂದು ತಿಳಿಸಿದರು

ಪತಂಜಲಿ ಯೋಗ ಶಿಕ್ಷಣ ಸಂಸ್ಥೆಯ ಬೌದ್ಧಿಕ್ ಪ್ರಮುಖ್ ವೀಣಾ ಮಂಜುನಾಥ್ ಮಾತನಾಡಿ, ಭಾರತೀಯ ಯೋಗ ಇಂದು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಟ್ಟಿದೆ.  ವಿಶ್ವ ದ 200 ರಾಷ್ಟ್ರಗಳಲ್ಲಿ ಯೋಗ ಶಿಕ್ಷಣವನ್ನು ಕಲಿಸಲಾಗುತ್ತಿದೆ. ಪತಂಜಲಿ ಯೋಗ ಶಿಕ್ಷಣ ಸಂಸ್ಥೆಗಳು ಮಾನವ ಜನಾಂಗದ ಒಳಿತಿಗಾಗಿ ಉಚಿತವಾಗಿ ಯೋಗ ಶಿಕ್ಷಣ ನೀಡುತ್ತಿದೆ. ಮಾನವೀಯತೆಗಾಗಿ ಯೋಗ ಎಂಬ ಧ್ಯೇಯವನ್ನು ಗುರಿಯಾಗಿಸಿ ಮುನ್ನಡೆಯುತ್ತಿದೆ ಎಂದರು

ಮುಂಜಾನೆ 5,30 ರಿಂದ ಯೋಗ ಪ್ರದರ್ಶನ ನಡೆಸಿ, ನಗರದ ಪ್ರಮುಖ ಬೀದಿಗಳಲ್ಲಿ ಸಂಕೀರ್ತನೆಗಳೊಂದಿಗೆ ಶೋಭಾಯಾತ್ರೆ  ನಡೆಸಿಕೊಡಲಾಯಿತು. ನಗರದ ಪ್ರಮುಖ ಶಾಲೆಗಳ ವಿದ್ಯಾರ್ಥಿ ಗಳು ಗ್ರಾಮಾಂತರ ಪ್ರದೇಶದ ಯೋಗ ಪಟುಗಳು ಸಾಮೂಹಿಕವಾಗಿ ಯೋಗ ಪ್ರದರ್ಶನ ನೀಡಿದರು.

ತಾಲ್ಲೂಕು ಆಡಳಿತ, ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಯೋಗಾಭ್ಯಾಸ

ಶಿಡ್ಲಘಟ್ಟ ನಗರದ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಮಂಗಳವಾರ ವಿಶ್ವ ಯೋಗ ದಿನಾಚರಣೆಯ ಪ್ರಯುಕ್ತ ತಾಲ್ಲೂಕು ಆಡಳಿತ, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳೊಂದಿಗೆ ಯೋಗಾಸನಗಳನ್ನು ಮಾಡಿ ತಹಶೀಲ್ದಾರ್ ಬಿ.ಎಸ್.ರಾಜೀವ್ ಅವರು ಮಾತನಾಡಿದರು.

ದೇಹ, ಮನಸ್ಸು, ಉಸಿರು ಎಲ್ಲವನ್ನು ಒಂದೇ ಬಾರಿ ನಮ್ಮ ನಿಯಂತ್ರಣದಲ್ಲಿಡಲು ಸಾಧ್ಯವಾಗಿಸುವುದು ಯೋಗ ಮಾತ್ರ. ಯೋಗ ಕೇವಲ ದೈಹಿಕ ಆರೋಗ್ಯ ಮಾತ್ರವಲ್ಲದೆ ಮಾನಸಿಕ ಆರೋಗ್ಯದ ಮೇಲೂ ಸಾಕಷ್ಟು ಸಕಾರಾತ್ಮಕ ಪರಿಣಾಮ ಬೀರುತ್ತದೆ ಎಂದು ತಿಳಿಸಿದರು.

ಯೋಗದ ಆಚರಣೆಗೆ ಯಾವುದೇ ಧರ್ಮ, ಜಾತಿಗಳ ಕಟ್ಟಳೆಗಳಿಲ್ಲ. ವಿಶ್ವದ ಬಹುತೇಕ ಎಲ್ಲ ರಾಷ್ಟ್ರಗಳೂ ಯೋಗದ ಮಹತ್ವವನ್ನು ಅರಿತು ತಮ್ಮ ರಾಷ್ಟ್ರಗಳಲ್ಲಿ ಯೋಗ ಆಚರಣೆ ಮಾಡುತ್ತಾರೆ. ದೇಹದ ಪ್ರತಿ ಭಾಗದಲ್ಲೂ ನವಚೈತನ್ಯ ತುಂಬಿಕೊಳ್ಳಲು ಯೋಗ ಸಹಕಾರಿ. ಯೋಗ ದೇಹ, ಮನಸ್ಸು ಮತ್ತು ಉಸಿರನ್ನು ಐಕ್ಯವಾಗಿಸುತ್ತದೆ. ಈ ಮೂರೂ ಸಾಮರಸ್ಯದಿಂದಿರುವಾಗ ದೇಹ ಸುಸ್ಥಿತಿಯಲ್ಲಿರುತ್ತದೆ ಎಂದರು.

ತಾಲ್ಲೂಕು ಪಂಚಾಯಿತಿ ಇಒ ಮುನಿರಾಜು, ತಾಲ್ಲುಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ, ಕ್ಷೇತ್ರ ಶಿಕ್ಷಣಾಧಿಕಾರಿ ರಘುನಾಥರೆಡ್ಡಿ, ಸಿಡಿಪಿಒ ನವತಾಜ್, ಪ್ರಾಂಶುಪಾಲ ಶಿವಲಿಂಗೇಗೌಡ, ಮುಖ್ಯ ಶಿಕ್ಷಕಿ ಮಂಜುಳಾ, ದೇವರಾಜ್ ಹಾಜರಿದ್ದರು.

ಶಿಡ್ಲಘಟ್ಟ ತಾಲ್ಲೂಕಿನ ಅಪ್ಪೇಗೌಡನಹಳ್ಳಿಯಲ್ಲಿರುವ ಇಂದಿರಾಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳು ಮಂಗಳವಾರ ವಿಶ್ವ ಯೋಗ ದಿನಾಚರಣೆಯ ಪ್ರಯುಕ್ತ ಯೋಗಾಸನಗಳನ್ನು ಮಾಡಿದರು

ಶಿಡ್ಲಘಟ್ಟ ತಾಲ್ಲೂಕಿನ ವರದನಾಯಕನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಮಂಗಳವಾರ ವಿಶ್ವ ಯೋಗ ದಿನಾಚರಣೆಯ ಪ್ರಯುಕ್ತ ಶಿಕ್ಷಕರ ಮಾರ್ಗದರ್ಶನದಲ್ಲಿ ಯೋಗಾಸನಗಳನ್ನು ಮಾಡಿದರು

ಶಿಡ್ಲಘಟ್ಟದ ನ್ಯಾಯಾಲಯದ ಆವರಣದಲ್ಲಿ ಮಂಗಳವಾರ ನ್ಯಾಯಾಧೀಶರು, ವಕೀಲರು ಹಾಗೂ ಸಿಬ್ಬಂದಿ ವಿಶ್ವ ಯೋಗ ದಿನಾಚರಣೆಯ ಪ್ರಯುಕ್ತ ಯೋಗಾಸನಗಳನ್ನು ಮಾಡಿದರು

Join SIDLAGHATTA Telegram Channel

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶
https://www.youtube.com/c/sidlaghatta

Website 🌐
http://www.sidlaghatta.com

📱 Join Telegram
https://t.me/Sidlaghatta

- Advertisement -
RELATED ARTICLES
- Advertisment -

Most Popular

error: Content is protected !!