ರಾಷ್ಟ್ರೀಯ ವೈದ್ಯರ ದಿನಾಚರಣೆ

- Advertisement -
- Advertisement -

Jangamakote, Sidlaghatta : ವೈದ್ಯರ ಸೇವಾ ಕಾರ್ಯಕ್ಕೆ ಬೆಲೆ ಕಟ್ಟಲಾಗದು. ಇಂದು ಜಗತ್ತಿನಲ್ಲಿ ನಾವೆಲ್ಲರೂ ಉತ್ತಮ ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಂಡು ನೆಮ್ಮದಿಯ ಬದುಕನ್ನು ನಡೆಸುತ್ತಿದೇವೆ. ದೇಶ ಅಭಿವೃದ್ದಿಯ ಹಾದಿಯಲ್ಲಿ ಸಾಗುತ್ತಿದೆ ಎಂದರೆ ಅದಕ್ಕೆ ವೈದ್ಯರ ಕೊಡುಗೆ ಅಪಾರ ಎಂದು ಜಂಗಮಕೋಟೆಯ ಸರ್.ಎಂ.ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್‌ ನ ಅಧ್ಯಕ್ಷ ಪುನೀತ್ ತಿಳಿಸಿದರು.

ತಾಲ್ಲೂಕಿನ ಜಂಗಮಕೋಟೆ ಹೋಬಳಿ ಕೇಂದ್ರದಲ್ಲಿನ ಜಂಗಮಕೋಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸರ್.ಎಂ.ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್‌ ನಿಂದ ಹಮ್ಮಿಕೊಂಡಿದ್ದ ವೈದ್ಯರ ದಿನಾಚರಣೆ ಕಾರ್ಯಕ್ರಮದಲ್ಲಿ ವೈದ್ಯೆ ಡಾ.ಅಂಬಿಕಾ ಮತ್ತು ಸಿಬ್ಬಂದಿಯನ್ನು ಸನ್ಮಾನಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ನಾವು ವೈದ್ಯರನ್ನು ಹಾಗೂ ಅವರ ಸೇವೆಯನ್ನು ಸ್ಮರಿಸಬೇಕು. ಎಲ್ಲರ ಸಹಕಾರದಿಂದ ನಾವೆಲ್ಲರೂ ಉತ್ತಮ ಆರೋಗ್ಯವಂತರಾಗಿ ಉತ್ತಮ ದೇಶವನ್ನು ಕಟ್ಟುವ ಕೆಲಸ ಆಗಬೇಕಿದೆ ಎಂದು ಹೇಳಿದರು.

ಜಂಗಮಕೋಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಕಾರಿ ಡಾ.ಅಂಬಿಕಾ ಮತ್ತು ಸಿಬ್ಬಂದಿ ಕುಮಾರಸ್ವಾಮಿ, ಉಮಾ, ಆಶಾ ಇನ್ನಿತರರನ್ನು ಸನ್ಮಾನಿಸಲಾಯಿತು. ಟ್ರಸ್ಟ್‌ ನ ಉಪಾಧ್ಯಕ್ಷ ಚನ್ನಕೇಶವ, ಮಂಜುನಾಥ್, ಶಬ್ಬೀರ್, ಮಲ್ಲೇಶ್, ಸುನಿಲ್, ನಸ್ರೀನ್, ಫರ್ವೀನ್‌ತಾಜ್ ಹಾಜರಿದ್ದರು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!