Home Sidlaghatta ನಾಡಪ್ರಭು ಕೆಂಪೇಗೌಡ ಹಾಗೂ ಡಾ.ಫ.ಗು.ಹಳಕಟ್ಟಿ ಜಯಂತಿಗಳ ಪೂರ್ವಭಾವಿ ಸಭೆ

ನಾಡಪ್ರಭು ಕೆಂಪೇಗೌಡ ಹಾಗೂ ಡಾ.ಫ.ಗು.ಹಳಕಟ್ಟಿ ಜಯಂತಿಗಳ ಪೂರ್ವಭಾವಿ ಸಭೆ

0
168

Sidlaghatta : ರಾಷ್ಟ್ರೀಯ ಮತ್ತು ನಾಡ ಹಬ್ಬಗಳ ಆಚರಣಾ ಸಮಿತಿಯಿಂದ ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ನಾಡಪ್ರಭು ಕೆಂಪೇಗೌಡ ಹಾಗೂ ಡಾ.ಫ.ಗು.ಹಳಕಟ್ಟಿ ಅವರ ಜಯಂತಿಯನ್ನು ತಾಲ್ಲೂಕು ಆಡಳಿತದಿಂದ ಆಚರಿಸುವ ಬಗ್ಗೆ ಪೂರ್ವಭಾವಿ ಸಭೆ ನಡೆಯಿತು.

ತಹಶೀಲ್ದಾರ್ ಬಿ.ಎನ್.ಸ್ವಾಮಿ ಮಾತನಾಡಿ, ನಮ್ಮ ಈ ನಾಡಿನ ಮಹಾನ್ ನಾಯಕರು ಯಾರೇ ಆಗಲಿ ಅವರನ್ನು ಒಂದು ಜಾತಿ, ಒಂದು ವರ್ಗ, ಒಂದು ಧರ್ಮಕ್ಕೆ ಸೀಮಿತಗೊಳಿಸಬಾರದು, ಅದರಿಂದ ಅವರ ಮಹತ್ವ, ಶಕ್ತಿಯನ್ನು ನಾವೇ ಕುಂದಿಸಿದಂತಾಗುತ್ತದೆ ಎಂದರು.

ನಾಡಪ್ರಭು ಕೆಂಪೇಗೌಡ ಹಾಗೂ ಡಾ.ಫ.ಗು.ಹಳಕಟ್ಟಿ ಅವರು ಈ ಸಮಾಜಕ್ಕೆ ತನ್ನದೇ ಆದ ಮಹತ್ವ ಕೊಡುಗೆಯನ್ನು ನೀಡಿದ್ದಾರೆ. ಅವರು ಜಾತಿ ಧರ್ಮವನ್ನು ಮೀರಿ ಈ ಸಮಾಜದ ಒಳಿತಿಗಾಗಿ ತಮ್ಮ ಬದುಕನ್ನು ಮುಡುಪಾಗಿಟ್ಟ ಮಹನೀಯರು ಎಂದರು.

ಅವರ ತತ್ವ ಆದರ್ಶ ಬದುಕಿನ ಬಗ್ಗೆ ನಾವು ತಿಳಿದುಕೊಳ್ಳಬೇಕು, ನಮ್ಮ ಮುಂದಿನ ಪೀಳಿಗೆಗೂ ತಿಳಿಸಿಕೊಡುವ ಕೆಲಸ ಆಗಬೇಕಿದೆ. ಅದಕ್ಕಾಗಿ ಈ ಜಯಂತಿಯು ಪೂರಕವಾಗಿ ಅರ್ಥಪೂರ್ಣವಾಗಿ ನಡೆಸಬೇಕೆಂದು ಮನವಿ ಮಾಡಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಕಾರಿ ಹೇಮಾವತಿ, ನಗರಸಭೆ ಪೌರಾಯುಕ್ತ ಮೋಹನ್, ಸರಕಾರಿ ನೌಕರರ ಸಂಘದ ರಾಜ್ಯ ಕಾರ್ಯದರ್ಶಿ ಕೆ.ಎನ್.ಸುಬ್ಬಾರೆಡ್ಡಿ, ಸರ್ಕಲ್ ಇನ್ಸ್‌ಪೆಕ್ಟರ್ ಎಂ.ಶ್ರೀನಿವಾಸ್, ಗ್ರಾಮಾಂತರ ಠಾಣೆಯ ಎಸ್‌.ಐ ನಾಗರಾಜ್, ಒಕ್ಕಲಿಗರ ಸಂಘದ ಅಧ್ಯಕ್ಷ ಬಿ.ನಾರಾಯಣಸ್ವಾಮಿ, ಒಕ್ಕಲಿಗರ ಯುವ ವೇದಿಕೆಯ ಅಧ್ಯಕ್ಷ ಜೆ.ಎಸ್.ವೆಂಕಟಸ್ವಾಮಿ ಭಾಗವಹಿಸಿದ್ದರು.

For Daily Updates WhatsApp ‘HI’ to 7406303366

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!