Sidlaghatta : ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ CEO ಪ್ರಕಾಶ್ ಜಿ.ಟಿ. ನಿಟ್ಟಾಲಿ (Prakash G T Nittali) ಅವರು ಸೋಮವಾರ ಶಿಡ್ಲಘಟ್ಟ ತಾಲ್ಲೂಕಿನ ಕುಂಭಿಗಾನಹಳ್ಳಿ ಮತ್ತು ಚೀಮಂಗಲ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ವಿವಿಧ ಕಾಮಗಾರಿಗಳನ್ನು ವೀಕ್ಷಿಸಿದರು.
ಕುಂಭಿಗಾನಹಳ್ಳಿಯ ಗ್ರಾ.ಪಂ ವ್ಯಾಪ್ತಿಯ ಸಿಸಿ ಚರಂಡಿ, ಮಾದರಿ ಅಂಗನವಾಡಿ ಕೇಂದ್ರ, ಶೌಚಾಲಯ ಕಟ್ಟಡ ಕಾಮಗಾರಿಗಳ ಪರಿಶೀಲನೆ ನಡೆಸಿದರು. ನಂತರ ಚೀಮಂಗಲ ಗ್ರಾ.ಪಂ ವ್ಯಾಪ್ತಿಯ ಸರ್ಕಾರಿ ಶಾಲಾ ಉದ್ಯಾನವನ, ಸಂತೆ ಮೈದಾನ ಹಾಗೂ ಸರ್ಕಾರಿ ಶಾಲೆಯ ಆಟದ ಮೈದಾನ ಕಾಮಗಾರಿಗಳ ವೀಕ್ಷಣೆ ಮಾಡಿದರು. ಈ ವೇಳೆ ಸಂಬಂಧಪಟ್ಟ ಅಧಿಕಾರಿಗಳಿಂದ ಕಾಮಗಾರಿಗಳ ಪ್ರಗತಿಯ ಬಗ್ಗೆ ಮಾಹಿತಿ ಪಡೆದರು.
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ (ನರೇಗಾ) ಮಾನವ ದಿನಗಳ ಸೃಜನೆ ಮತ್ತು ವೈಯಕ್ತಿಕ ಕಾಮಗಾರಿಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕೆಂದು ಸೂಚಿಸಿದರು. “ನರೇಗಾ ಯೋಜನೆಯಲ್ಲಿ ಜಿಲ್ಲೆ ಪ್ರಗತಿ ಸಾಧಿಸಿದೆ. ಈ ಮುನ್ನಡೆ ಮುಂದುವರಿಯಬೇಕು,” ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ತಾ.ಪಂ. ನರೇಗಾ ಸಹಾಯಕ ನಿರ್ದೇಶಕ ಚಂದ್ರಪ್ಪ, ಚೀಮಂಗಲ ಪಿಡಿಓ ತನ್ವಿರ್ ಅಹಮ್ಮದ್, ಕುಂಭಿಗಾನಹಳ್ಳಿ ಪಿಡಿಓ ಪ್ರಶಾಂತ್, ಜಿಲ್ಲಾ ಪಂಚಾಯತ್ ಎಡಿಪಿಸಿ ಹರೀಶ್, ಟಿ.ಸಿ. ನಾಗೇಂದ್ರ, ಗೌತಮ್ ಮತ್ತು ಗ್ರಾಮ ಪಂಚಾಯಿತಿಗಳ ಸಿಬ್ಬಂದಿ ಉಪಸ್ಥಿತರಿದ್ದರು.