Home Sidlaghatta ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ 190 ಪ್ರಕರಣಗಳು ಇತ್ಯರ್ಥ

ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ 190 ಪ್ರಕರಣಗಳು ಇತ್ಯರ್ಥ

0
231

Sidlaghatta : ಶಿಡ್ಲಘಟ್ಟದ ನ್ಯಾಯಾಲಯದಲ್ಲಿ ಶನಿವಾರ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಆದೇಶದ ಮೇರೆಗೆ ಶಿಡ್ಲಘಟ್ಟ ತಾಲ್ಲೂಕು ಕಾನೂನು ಸೇವಾ ಸಮಿತಿ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ ಒಟ್ಟು 190 ಪ್ರಕರಣಗಳು ಇತ್ಯರ್ಥಗೊಂಡು 1 ಕೋಟಿ 20 ಲಕ್ಷ 2 ಸಾವಿರ 486 ರೂ ಪಾವತಿಸಲಾಗಿದೆ.

ಪ್ರಭಾರ ಹಿರಿಯ ಸಿವಿಲ್ ನ್ಯಾಯಾಧೀಶ ಪ್ರಕಾಶ್, ಪ್ರಧಾನ ಸಿವಿಲ್ ನ್ಯಾಯಾಧೀಶೆ ಜೆ.ಪೂಜಾ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಷ್ಟ್ರೀಯ ಲೋಕ್ ಅದಾಲತ್ ವಿವಿಧ ರೀತಿ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಬಗೆಹರಿಸಲಾಯಿತು

ಸಂಧಾನಕಾರರಾಗಿ ವಕೀಲೆ ಆರ್.ವಿ.ವೀಣಾ, ಹಿರಿಯ ವಕೀಲ ಡಿ.ಆಶ್ವತ್ಥನಾರಾಯಣ್, ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಎ.ನಾರಾಯಣಸ್ವಾಮಿ, ಕಾರ್ಯದರ್ಶಿ ಸಿ.ಜಿ.ಭಾಸ್ಕರ್ ಹಾಜರಿದ್ದರು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

error: Content is protected !!