Sidlaghatta : ಶಿಡ್ಲಘಟ್ಟ ನಗರದ ತಾಲ್ಲೂಕು ಕಚೇರಿ (Taluk Office) ಸಭಾಂಗಣದಲ್ಲಿ ತಾಲ್ಲೂಕು ಆಡಳಿತದಿಂದ ಮಂಗಳವಾರ ಆಯೋಜಿಸಲಾಗಿದ್ದ ಮಡಿವಾಳ ಮಾಚಿದೇವರ ಜಯಂತಿ (Madivala Machideva Jayanthi) ಆಚರಣೆ ಕಾರ್ಯಕ್ರಮದಲ್ಲಿ ಮಾಚಿದೇವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಶಿರಸ್ತೇದಾರ್ ಕೆ.ಎನ್.ಮಂಜುನಾಥ್ ಮಾತನಾಡಿದರು.
ಸಮಾನತೆ, ಜಾತೀಯತೆ ನಿರ್ಮೂಲನೆ, ಸ್ತ್ರೀ ಸ್ವಾತಂತ್ರ್ಯ ಹನ್ನೆರಡನೆಯ ಶತಮಾನದಲ್ಲಿ ನಡೆದ ಕಲ್ಯಾಣ ಕ್ರಾಂತಿಯ ಮೂಲ ಉದ್ದೇಶವಾಗಿತ್ತು. ಅಂದಿನ ಸಾಮಾಜಿಕ ಕ್ರಾಂತಿಯಲ್ಲಿ ಮಡಿವಾಳ ಮಾಚಿದೇವರು ವಚನ ಗ್ರಂಥಗಳನ್ನು ಸಂರಕ್ಷಿಸುವ ಮೂಲಕ ಶರಣರ ಗೌರವಕ್ಕೆ ಪಾತ್ರರಾಗಿದ್ದರು ಎಂದು ಅವರು ತಿಳಿಸಿದರು.
ಮಾಚಿದೇವರು ಬಸವಾದಿ ಶರಣರ ಬಟ್ಟೆಯನ್ನು ತೊಳೆದು ಮಡಿ ಮಾಡುವ ಕಾಯಕದ ಜತೆಗೆ ಜನರ ಮನಸ್ಸಿನಲ್ಲಿರುವ ಕೊಳಕನ್ನು ಸಹ ತೊಳೆಯುವ ಕೆಲಸ ಮಾಡಿದ್ದರು. ಮಡಿವಾಳ ಮಾಚಿದೇವರು ಹನ್ನೆರಡನೆಯ ಶತಮಾನದ ಶ್ರೇಷ್ಠ ವ್ಯಕ್ತಿ. ಬಸವಕಲ್ಯಾಣದ ತ್ರಿಪುರಾಂತ ಕೆರೆಗೆ ಬಂದಾಗ ಬಸವ ಸಮೂಹವನ್ನು ನೋಡಿದ್ದರು. ಅವರಿಂದ ಪ್ರಭಾವಿತರಾಗಿದ್ದರು ಎಂದು ಹೇಳಿದರು.
ಸಮಾಜಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಜಗದೀಶ್, ಮಡಿವಾಳ ಯುವಕರ ಸಂಘದ ಅಧ್ಯಕ್ಷ ಡಿ.ವಿ.ಕೃಷ್ಣಪ್ಪ, ಉಪಾಧ್ಯಕ್ಷ ಎನ್.ಹರೀಶ್, ಖಜಾಂಚಿ ದೇವರಾಜ್, ಸಮುದಾಯದ ಮುಖಂಡರಾದ ಅಬ್ಲೂಡು ದೇವರಾಜ್, ಹಿತ್ತಲಹಳ್ಳಿ ಮುನಿರಾಜು, ಗಂಗಾಧರ್, ಚಂದ್ರಪ್ಪ, ನಾರಾಯಣಸ್ವಾಮಿ ಸುರೇಶ್ ಹಾಜರಿದ್ದರು.