21.8 C
Bengaluru
Thursday, February 26, 2026

‘ಸಂತೆ’ಯ ಸಮಸ್ಯೆಗಳ ಪರಿಶೀಲನೆ

- Advertisement -
- Advertisement -

Sidlaghatta : ಶಿಡ್ಲಘಟ್ಟದ ಸೋಮವಾರದ ಸಂತೆಯಲ್ಲಿನ ಸಮಸ್ಯೆಗಳ ಬಗ್ಗೆ ವರದಿಗಳು ಪ್ರಕಟವಾದ ಸಂಬಂಧವಾಗಿ ಸೋಮವಾರ ನಗರಸಭೆ ಅಧ್ಯಕ್ಷ ಎಂ.ವಿ.ವೆಂಕಟಸ್ವಾಮಿ, ಸದಸ್ಯರಾದ ಎಲ್.ಅನಿಲ್ ಕುಮಾರ್, ಮಂಜುನಾಥ್, ಮನೋಹರ್, ಸುರೇಶ್ ಹಾಗೂ ನಗರಸಭೆ AEE ಮೋಹನ್ ಭೇಟಿ ನೀಡಿ ಪರಿಶೀಲಿಸಿದರು. ಸಂತೆಗೆ ಆಗಮಿಸಿರುವ ವ್ಯಾಪಾರಿಗಳು ಹಾಗೂ ಗ್ರಾಹಕರ ಸಮಸ್ಯೆಗಳನ್ನು ಆಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ನಗರಸಭೆ ಅಧ್ಯಕ್ಷ ಎಂ.ವಿ.ವೆಂಕಟಸ್ವಾಮಿ, “ತಿನ್ನುವ ಪದಾರ್ಥಗಳನ್ನು ಮಾರುವ ಸ್ಥಳ ಸ್ವಚ್ಛವಾಗಿರಬೇಕು. ಮಾರುವವರಿಗೆ ಮತ್ತು ಕೊಳ್ಳುವವರಿಗೆ ಅನುಕೂಲವಾಗಿರಬೇಕು. ಈ ಬಗ್ಗೆ ಶಾಸಕರಿಗೂ ವಿಚಾರ ತಿಳಿಸುತ್ತೇವೆ. ಸಾಧ್ಯವಾದಷ್ಟೂ ಬೇಗ ಎಲ್ಲಾ ಸಮಸ್ಯೆಗಳನ್ನೂ ಬಗೆ ಹರಿಸಲಾಗುವುದು” ಎಂದು ತಿಳಿಸಿದರು.

ನಗರಸಭಾ ಸದಸ್ಯ ಎಲ್.ಅನಿಲ್ ಕುಮಾರ್ ಮಾತನಾಡಿ, “ಸಂತೆಯಲ್ಲಿ ಸಮಸ್ಯೆಗಳ ಆಗರವೇ ಇದೆ. ಮೂಲ ಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ನಾವುಗಳು ವಿಫಲವಾಗಿದ್ದೇವೆ. ಬೀದಿ ದೀಪಗಳಿಲ್ಲ, ಶೀಟುಗಳು ಒಡೆದುಹೋಗಿವೆ. ಎಲ್ಲಕ್ಕಿಂತ ಮುಖ್ಯವಾಗಿ ಹೆಂಗಸರಿಗೆ ಶೌಚಾಲಯದ ವ್ಯವಸ್ಥೆ ಮಾಡಬೇಕಿದೆ. ಕುಡಿಯುವ ನೀರಿನ ಸಮಸ್ಯೆ ಕೂಡ ಇದೆ. ಇಲ್ಲಿನ ಸಮಸ್ಯೆಗಳನ್ನು ಶಾಸಕರ ಗಮನಕ್ಕೆ ತಂದು ಪ್ರಾಮಾಣಿಕವಾಗಿ ಸಮಸ್ಯೆಗಳನ್ನು ಬಗೆಹರಿಸುತ್ತೇವೆ” ಎಂದು ಹೇಳಿದರು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!