28.8 C
Bengaluru
Monday, March 10, 2025

ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸರ್ವೋದಯ ದಿನಾಚರಣೆ

- Advertisement -
- Advertisement -

Sidlaghatta : ಶಿಡ್ಲಘಟ್ಟ ನಗರದ ಸಿದ್ಧಾರ್ಥ ನಗರದಲ್ಲಿ ಭಾನುವಾರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ (Kannada Sahitya Parishat) ವತಿಯಿಂದ ಹುತಾತ್ಮರ ದಿನ ಅಥವಾ ಸರ್ವೋದಯ ದಿನವನ್ನು ಆಚರಿಸಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ಆರ್.ಅನಂತಕೃಷ್ಣ ಮಾತನಾಡಿದರು.

ಈ ದಿನವನ್ನು ಭಾರತದಲ್ಲಿ ಹುತಾತ್ಮರ ದಿನ ಅಥವಾ ಸರ್ವೋದಯ ದಿನವೆಂದು ಆಚರಿಸಲಾಗುತ್ತದೆ. ಸ್ವಾತಂತ್ರ್ಯ ಪೂರ್ವದಲ್ಲಿ ಮಾತ್ರವಲ್ಲ, ಸ್ವಾತಂತ್ರ್ಯ ಬಂದ ನಂತರವೂ ಹಲವಾರು ಯೋಧರು ನಮ್ಮ ದೇಶದ ರಕ್ಷ ಣೆಗಾಗಿ ಬಲಿದಾನ ಕೊಟ್ಟಿದ್ದಾರೆ. ಇವರನ್ನು ಈ ದಿನ ಸ್ಮರಿಸುತ್ತೇವೆ.

ಈ ದಿನ ಭಾರತದ ಪಿತಾಮಹ ಮಹಾತ್ಮಾ ಗಾಂಧೀಜಿ ಅವರು ನಾಥುರಾಮ್‌ ಗೋಡ್ಸೆ ಅವರಿಂದ ಹತರಾದ ದಿನವೂ ಹೌದು. ಅನಾರೋಗ್ಯದ ನಿಮಿತ್ತ ಜಿಲ್ಲೆಯ ನಂದಿ ಬೆಟ್ಟಕ್ಕೆ ಎರಡು ಬಾರಿ ಭೇಟಿ ನೀಡಿರುವ ಗಾಂಧೀಜಿ ಕರ್ನಾಟಕಕ್ಕೆ ಒಟ್ಟು 18 ಬಾರಿ ಭೇಟಿ ಕೊಟ್ಟಿದ್ದರು. ಗಾಂಧೀಜಿಯವರ ಹತ್ಯೆಯ ನಂತರ ಅವರ ಚಿತಾಭಸ್ಮ ಕಳಸವನ್ನು ಅಂದಿನ ಮುಖ್ಯಮಂತ್ರಿ ಕೆ.ಸಿ.ರೆಡ್ಡಿ ಅವರು ತಂದು ನಂದಿಬೆಟ್ಟದ ಅಮೃತಸರೋವರ ಮತ್ತು ಕೋಲಾರದ ಅಂತರಗಂಗೆಯಲ್ಲಿ ವಿಸರ್ಜನೆ ಮಾಡಿಸಿದ್ದರು. ಪೂಜ್ಯ ಬಾಪು ಅವರ ವ್ಯಕ್ತಿತ್ವ, ಆಲೋಚನೆಗಳು ಮತ್ತು ಆದರ್ಶಗಳು ನಮಗೆ ಸ್ಫೂರ್ತಿ ನೀಡುತ್ತಲೇ ಇರುತ್ತದೆ ಎಂದು ಅವರು ತಿಳಿಸಿದರು.

ನಗರಸಭೆ ಅಧ್ಯಕ್ಷೆ ಸುಮಿತ್ರಾ ರಮೇಶ್ ಮಾತನಾಡಿ, ನೂತನ ಕಸಾಪ ತಾಲ್ಲೂಕು ಅಧ್ಯಕ್ಷ ಬಿ.ಆರ್.ಅನಂತಕೃಷ್ಣ ಭಾಷೆ, ಸಾಹಿತ್ಯ, ಕಲೆ, ಶಾಲಾ ಕಾಲೇಜುಗಳಲ್ಲಿ ಕನ್ನಡದ ಕಾರ್ಯಕ್ರಮಗಳ ಮೂಲಕ ಕ್ರಿಯಾಶೀಲವಾಗಿ ಸೇವೆ ಸಲ್ಲಿಸಿರುವರು. ಈಗ ಎರಡನೆಯ ಬಾರಿ ಅವರಿಗೆ ಸೇವೆ ಮಾಡಲು ಅವಕಾಶ ದೊರೆತಿದ್ದು, ಅವರು ತಮ್ಮ ಅವಧಿಯಲ್ಲಿ ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸಿ ಮತ್ತೊಮ್ಮೆ ಕನ್ನಡ ಸಾಹಿತ್ಯ ಪರಿಷತ್ತಿಗೆ ಗೌರವ ತರುವ ಕೆಲಸ ಆಗಲಿ ಎಂದರು.

 ಶಿಡ್ಲಘಟ್ಟ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ನಗರಸಭೆ ಅಧ್ಯಕ್ಷೆ ಸುಮಿತ್ರಾ ರಮೇಶ್ ದಂಪತಿಯನ್ನು ಗೌರವಿಸಿ, ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕ್ರಮಗಳಿಗೆ ಸಹಕಾರ ನೀಡಿ ಪ್ರೋತ್ಸಾಹಿಸಬೇಕೆಂದು ಮನವಿ ಮಾಡಿದರು.

 ಮುಖಂಡರಾದ ಎಸ್.ಎಂ.ರಮೇಶ್, ಲಕ್ಷ್ಮೀ ನಾರಾಯಣ (ಲಚ್ಚಿ ), ಕಸಾಪ ನಿಕಟ ಪೂರ್ವ ಕಾರ್ಯದರ್ಶಿ ಸತೀಶ್, ಮುನಿಯಪ್ಪ, ಟಿ.ಟಿ.ನರಸಿಂಹಪ್ಪ, ಮಂಜುನಾಥ್, ರವಿ, ಅನಿಲ್ ,ರಾಮಕೃಷ್ಣ , ಮುನಿಕೃಷ್ಣ ಹಾಜರಿದ್ದರು.

- Advertisement -
Latest news
- Advertisement -
Related news
- Advertisement -
error: Content is protected !!