ರಾಷ್ಟ್ರೀಯ ಜಂತು ಹುಳು ನಿವಾರಣೆ ದಿನಾಚರಣೆ

- Advertisement -
- Advertisement -

Melur, Sidlaghatta : ಮಕ್ಕಳು ತಿನ್ನುವ ಆಹಾರದಲ್ಲಿ ಪೌಷ್ಟಿಕಾಂಶದ ಕೊರತೆ ಒಂದೆಡೆಯಾದರೆ ಮಕ್ಕಳ ದೇಹದಲ್ಲಿರುವ ಜಂತುಹುಳುಗಳು ಆಹಾರ ಕಬಳಿಸಿ ಮತ್ತೊಂದೆಡೆ ಮಕ್ಕಳನ್ನು ಅನಾರೋಗ್ಯಕ್ಕೆ ಸಿಲುಕಿಸುತ್ತಿವೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ ಮೂರ್ತಿ ತಿಳಿಸಿದರು.

ತಾಲ್ಲೂಕಿನ ಮೇಲೂರು ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಮೇಲೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಜಂತು ಹುಳು ನಿವಾರಣೆ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಕ್ಕಳಲ್ಲಿ ಅಪೌಷ್ಟಿಕತೆಯನ್ನು ಕಡಿಮೆಗೊಳಿಸಲು ಹಾಗೂ ಜಂತುಹುಳುಗಳ ಬಾಧೆಯಿಂದ ಮಕ್ಕಳನ್ನು ರಕ್ಷಿಸಲು ಮಕ್ಕಳಿಗೆ ಆಲ್ ಬೆಂಡಾಜೋಲ್ ಎಂಬ ಜಂತುಹುಳು ನಿವಾರಣಾ ಮಾತ್ರೆ ನೀಡುವ ಮೂಲಕ ರಾಷ್ಟ್ರೀಯ ಜಂತು ಹುಳು ನಿರ್ಮೂಲನಾ ದಿನಾಚರಣೆಯನ್ನು ಆಚರಿಸಲಾಗುತ್ತಿದೆ ಎಂದು ಹೇಳಿದರು.

ಜಂತು ಹುಳು ನಿರ್ಮೂಲನೆಯಿಂದಾಗಿ ಮಕ್ಕಳು ಸೇವನೆ ಮಾಡುವ ಪೌಷ್ಠಿಕ ಆಹಾರ ಮಕ್ಕಳ ದೇಹಕ್ಕೆ ಸರಿಯಾದ ರೀತಿಯಲ್ಲಿ ಲಭ್ಯವಾಗುತ್ತದೆ. ಜಂತುಹುಳು ನಿರ್ಮೂಲನೆಗೆ ಮಾತ್ರೆ ಸೇವಿಸುವುದು ಮಾತ್ರವಲ್ಲದೆ, ಶೌಚಾಲಯಕ್ಕೆ ಹೋಗಿ ಬಂದ ನಂತರ ಹಾಗೂ ಊಟಕ್ಕೆ ಮುನ್ನ ಕೈಗಳನ್ನು ಚೆನ್ನಾಗಿ ತೊಳೆಯುವ ಅಭ್ಯಾಸವನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಶಾಲೆಯ ಮುಖ್ಯಶಿಕ್ಷಕ ಭಾಸ್ಕರ್, ಮೇಲೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ರಮೇಶ್, ತಾಲ್ಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಎಸ್. ದೇವರಾಜ್, ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿ ಬಿ.ಎಂ. ದೇವರಾಜ್, ಆರೋಗ್ಯ ಸುರಕ್ಷಿತಾ ಅಧಿಕಾರಿ ಅಣ್ಣಮ್ಮ, ಆರೋಗ್ಯ ಸಿಬ್ಬಂದಿ, ಆಶಾ ಕಾರ್ಯಕರ್ತರು, ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!