Melur, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಮೇಲೂರು ಗ್ರಾಮದಲ್ಲಿ ಪುರಾತನ ಮನೆಯೊಂದರಲ್ಲಿ ಕಳ್ಳತನವಾಗಿರುವ (Theft) ಘಟನೆ ಗುರುವಾರ ರಾತ್ರಿ ನಡೆದಿದೆ.
ಮೇಲೂರು ಗ್ರಾಮದ ಗಂಗಮ್ಮನ ದೇವಸ್ಥಾನದ ಬಳಿ ಇರುವ ಮಹಡಿ ಲಕ್ಷ್ಮಣಗೌಡ ಎಂಬುವರ ಸ್ವತಂತ್ರ ಪೂರ್ವದ ಹಳೆಯ ಮನೆಯೊಳಗೆ ಯಾರೂ ಇಲ್ಲದ್ದನ್ನು ಗಮನಿಸಿ ಮನೆಯ ಹಿಂಬಾಗಿಲು ಮುರಿದು ಒಳನುಗ್ಗಿರುವ ಕಳ್ಳರು ಕಳ್ಳತನ ಮಾಡಿದ್ದಾರೆ. ಕಳ್ಳರು, ದೇವರ ಮನೆಯಲ್ಲಿದ್ದ ಬೆಳ್ಳಿ ಸಾಮಾನುಗಳನ್ನು ಕದ್ದೊಯ್ದಿದ್ದಾರೆ ಎನ್ನಲಾಗಿದೆ.
ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.