ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಅತ್ಯಾಚಾರ: ಆರೋಪಿ ನ್ಯಾಯಾಂಗ ಬಂಧನಕ್ಕೆ

- Advertisement -
- Advertisement -

Sidlaghatta : ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿಯಾಗಿಸಿದ ಆರೋಪಹೊತ್ತ ಸರಕಾರಿ ಶಾಲಾ ಮುಖ್ಯ ಶಿಕ್ಷಕ ಜಿ.ವೆಂಕಟೇಶ್ ಅವರನ್ನು ಪೊಲೀಸರು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಸಂತ್ರಸ್ತೆ ಬಾಲಕಿಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಬಾಲಕಿಯರ ಬಾಲ ಮಂದಿರದ ಆಶ್ರಯದಲ್ಲಿ ಇರಿಸಲಾಗಿದೆ.

ಡಿಡಿಪಿಐ ಬೈಲಾಂಜನೇಯಪ್ಪ, ಕ್ಷೇತ್ರ ಶಿಕ್ಷಣ ಅಧಿಕಾರಿ ನರೇಂದ್ರ ಕುಮಾರ್ ಇನ್ನಿತರರ ತಂಡವು ಸದರಿ ಶಾಲೆಗೆ ಭೇಟಿ ನೀಡಿ ಶಿಕ್ಷಕರು, ಮಕ್ಕಳನ್ನು ಮಾತನಾಡಿಸಿ ಮಕ್ಕಳಲ್ಲಿ ಆತ್ಮಸ್ಥೈರ್ಯವನ್ನು ತುಂಬಿ ಬಂದಿದ್ದಾರೆ.

ಜತೆಗೆ POCSO ಪ್ರಕರಣ ದಾಖಲಾದ ಹಿನ್ನಲೆಯಲ್ಲಿ ಮುಖ್ಯ ಶಿಕ್ಷಕ ಜಿ.ವೆಂಕಟೇಶ್ ಅವರನ್ನು ಅಮಾನತ್ತು ಮಾಡಿ ಇಲಾಖೆ ವಿಚಾರಣೆ ಕಾಯ್ದಿರಿಸಿ ಆದೇಶಿಸಲಾಗಿದೆ. ಸಿಪಿಐ ಅವರು ತನಿಖೆಯನ್ನು ಮುಂದುವರೆಸಿದ್ದಾರೆ.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!