Home Sidlaghatta ಮುಂಬರುವ ಚುನಾವಣೆಯಲ್ಲಿ ಶಿಡ್ಲಘಟ್ಟ ಕ್ಷೇತ್ರದಲ್ಲಿ BJP ಗೆ ಜಯ

ಮುಂಬರುವ ಚುನಾವಣೆಯಲ್ಲಿ ಶಿಡ್ಲಘಟ್ಟ ಕ್ಷೇತ್ರದಲ್ಲಿ BJP ಗೆ ಜಯ

0
Sidlaghatta Dr K Sudhakar Election MLA BJP

Sidlaghatta : ಯಾರು ಏನೇ ತಿಳಿದುಕೊಂಡಿದ್ದರೂ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ (Election) ಶಿಡ್ಲಘಟ್ಟ ಕ್ಷೇತ್ರದಿಂದ BJP ಪಕ್ಷದ ಶಾಸಕರು ಆಯ್ಕೆಯಾಗುತ್ತಾರೆ. ಕ್ಷೇತ್ರದಲ್ಲಿ ಕೇವಲ Congress ಹಾಗೂ JDS ನಡುವೆ ಪೈಪೋಟಿಯಿದೆ ಎಂದು ಕೆಲವರು ಭ್ರಮೆಯಲ್ಲಿದ್ದಾರೆ. ಆದರೆ ಮುಂದಿನ ಈ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗುವುದು ಮಾತ್ರ BJP ಪಕ್ಷದ ಅಭ್ಯರ್ಥಿಯೇ. ಆ ನಿಟ್ಟಿನಲ್ಲಿ ಕ್ಷೇತ್ರದ ಮುಖಂಡರು, ಕಾರ್ಯಕರ್ತರು ಸೇರಿದಂತೆ ನಾವೆಲ್ಲರೂ ಸೇರಿ ಮತ್ತಷ್ಟು ಶ್ರಮವಹಿಸಿ ದುಡಿಯಬೇಕು ಎಂದರು.

ಶಿಡ್ಲಘಟ್ಟ ನಗರದ ಶ್ರೀ ನಗರೇಶ್ವರ ಕಲ್ಯಾಣ ಮಂಟಪದಲ್ಲಿ ಬುಧವಾರ ಆಯೋಜಿಸಲಾಗಿದ್ದ ಬಿಜೆಪಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.

ಏಪ್ರಿಲ್ 1 ರಂದು ಕೇಂದ್ರ ಗೃಹಸಚಿವ ಅಮಿತ್ ಷಾ ಜಿಲ್ಲೆಯ ಮುದ್ದೇನಹಳ್ಳಿಯ ಶ್ರೀ ಸತ್ಯಸಾಯಿ ಆಸ್ಪತ್ರೆ ಶಂಖುಸ್ಥಾಪನೆ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದು ಶಿಡ್ಲಘಟ್ಟ ತಾಲ್ಲೂಕಿನಿಂದ ಕನಿಷ್ಠ ಸಾವಿರ ಮಂದಿ ಸಕ್ರಿಯ ಬಿಜೆಪಿ ಕಾರ್ಯಕರ್ತರು ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದರು.

 ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಆಡಳಿತ ವೈಖರಿಯನ್ನು ಇಡೀ ವಿಶ್ವವೇ ಮೆಚ್ಚುತ್ತಿದೆ. ಕೇಂದ್ರ ಸರ್ಕಾರದ ಜನಪರ ಯೋಜನೆಗಳನ್ನು ಜನರಿಗೆ ಮನವರಿಕೆ ಮಾಡಿ ಕೊಡುವ ಮೂಲಕ ಕ್ಷೇತ್ರದಲ್ಲಿ ಬಿಜೆಪಿ ಪಕ್ಷವನ್ನು ಮತ್ತಷ್ಟು ಬಲಪಡಿಸುವ ಕೆಲಸ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರಿಂದ ಆಗಬೇಕು ಎಂದರು.

 ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಕೇಶವಪ್ರಸಾದ್, ಬಿಜೆಪಿ ಗ್ರಾಮಂತರ ಮಂಡಲ ಅಧ್ಯಕ್ಷ ಸುರೇಂದ್ರಗೌಡ, ನಗರ ಮಂಡಲಾಧ್ಯಕ್ಷ ಎಸ್.ರಾಘವೇಂದ್ರ, ಮಾಜಿ ಶಾಸಕ ಎಂ.ರಾಜಣ್ಣ, ನಗರ ಯೋಜನಾ ಪಾಧಿಕಾರದ ಅಧ್ಯಕ್ಷ ಬಿ.ಸಿ.ನಂದೀಶ್, ನಗರಸಭೆ ಸದಸ್ಯ ನಾರಾಯಣಸ್ವಾಮಿ ಹಾಜರಿದ್ದರು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

error: Content is protected !!
Exit mobile version