Sidlaghatta : ಮಕ್ಕಳ ಮೇಲೆ ನಡೆಯುತ್ತಿರುವ ಲೈಂಗಿಕ ದೌರ್ಜನ್ಯ ಅತ್ಯಂತ ಅಮಾನವೀಯ ಕೃತ್ಯವಾಗಿದ್ದು, ಅದನ್ನು ಎದುರಿಸುವ ಬಗ್ಗೆ ಶಾಲೆಗಳಲ್ಲೇ ಮಕ್ಕಳಿಗೆ ಅರಿವು ಮೂಡಿಸುವ ಅಗತ್ಯವಿದೆ ಎಂದು ಪೊಲೀಸ್ ಸರ್ಕಲ್ ಇನ್ಸ್ ಪೆಕ್ಟರ್ ಶ್ರೀನಿವಾಸ್ ತಿಳಿಸಿದರು.
ನಗರದ ಶ್ರೀ ಸರಸ್ವತಿ ಕಾನ್ವೆಂಟ್ ಶಾಲೆಯಲ್ಲಿ ಗುರುವಾರ ಅಪರಾಧ ತಡೆ ಮಾಸಾಚರಣೆ ಅಂಗವಾಗಿ ಪೊಲೀಸ್ ಇಲಾಖೆಯಿಂದ ಆಯೋಜಿಸಿದ್ದ ಅರಿವು ನೆರವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಬಾಲ್ಯದಿಂದಲೇ ವಿದ್ಯಾರ್ಥಿಗಳಲ್ಲಿ ಶಿಸ್ತು, ಸಂಯಮ ಬೆಳೆಯಬೇಕು. ಕಾನೂನಿನ ಬಗ್ಗೆ ಅರಿವು ಇದ್ದರೆ, ಅಪರಾಧ ಕೃತ್ಯಗಳು ತಂತಾನೇ ಕಡಿಮೆಯಾಗುತ್ತವೆ. ಪೊಲೀಸರು ಜನಸ್ನೇಹಿಗಳು. ವಿದ್ಯಾರ್ಥಿಗಳಿಗೆ ಕಾನೂನು ಮಾಹಿತಿ ಬೇಕಾದಲ್ಲಿ ಇಲಾಖೆಗೆ ಬಂದು ಪಡೆಬಹುದು. ಮಕ್ಕಳಿಗೆ ಶಿಕ್ಷಣದ ಹಕ್ಕಿನ ಜೊತೆ ಅಭಿಪ್ರಾಯ ವ್ಯಕ್ತಪಡಿಸುವ ಹಕ್ಕೂ ಇದೆ. ಸಮಾನತೆಯ ಹಕ್ಕು ಹಾಗೂ ಸಾಮಾಜಿಕ ಅನ್ಯಾಯದ ಮತ್ತು ಶೋಷಣೆಯಿಂದ ರಕ್ಷಿಸಲ್ಪಡುವ ಹಕ್ಕನ್ನು ನೀಡಲಾಗಿದೆ ಎಂದು ಹೇಳಿದರು.
ಸಬ್ ಇನ್ಸ್ ಪೆಕ್ಟರ್ ವೇಣುಗೋಪಾಲ್, ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎನ್.ಶ್ರೀಕಾಂತ್, ಕಾರ್ಯದರ್ಶಿ ಆರ್.ನಾಗಲಕ್ಷ್ಮಿ, ಶಿಕ್ಷಕರು ಹಾಜರಿದ್ದರು.