18.3 C
Bengaluru
Tuesday, January 21, 2025

ಪ್ರಗತಿ ಪರಿಶೀಲನಾ ಸಭೆ

- Advertisement -
- Advertisement -

Sidlaghatta : ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಪರಸ್ಪರ ಹೊಂದಾಣಿಕೆಯಿಂದ ಕಾರ್ಯನಿರ್ವಹಿಸಿದಾಗ ಮಾತ್ರ ಕ್ಷೇತ್ರದ ಸಮಗ್ರ ಅಭಿವೃದ್ದಿ ಸಾಧ್ಯ ಎಂದು ಶಾಸಕ ಬಿ.ಎನ್. ರವಿಕುಮಾರ್ ಅಭಿಪ್ರಾಯಪಟ್ಟರು.

ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಾಜ್ಯದ ಹಿಂದುಳಿದ ಕ್ಷೇತ್ರಗಳಲ್ಲಿ ಒಂದಾದ ಶಿಡ್ಲಘಟ್ಟದ ಸಮಗ್ರ ಅಭಿವೃದ್ಧಿ ತನ್ನ ಪ್ರಮುಖ ಗುರಿ ಎಂದು ಹೇಳಿದ್ದಾರೆ. ಈ ನಿಟ್ಟಿನಲ್ಲಿ ಅಧಿಕಾರಿಗಳ ಸಂಪೂರ್ಣ ಸಹಕಾರ ಅಗತ್ಯವಿದೆ ಎಂದರು. ಸರ್ಕಾರದ ಯೋಜನೆಗಳು ಮತ್ತು ಅನುದಾನಗಳು ನೇರವಾಗಿ ಜನರ ಕಡೆ ತಲುಪಲು ಅಧಿಕಾರಿಗಳು ಶ್ರಮಿಸಬೇಕು ಎಂದರು.

ಅಭಿವೃದ್ದಿ ಕಾರ್ಯಗಳು:

ಗ್ರಾಮೀಣ ರಸ್ತೆ ಕಾಮಗಾರಿಗಳು: ತಕ್ಷಣವೇ ಪೂರಕ ಯೋಜನೆ ರೂಪಿಸಿ ಕಾರ್ಯಾರಂಭ ಮಾಡಬೇಕು. ಅರಣ್ಯ ಇಲಾಖೆ ರೈತರಿಗೆ ತೊಂದರೆ ನೀಡದಂತೆ ಕಡೆಯಿಂದ ಶಿಸ್ತನ್ನು ಪಾಲಿಸಬೇಕು.

ರೇಷ್ಮೆ ಗೂಡು ಮಾರುಕಟ್ಟೆ: ಶಿಡ್ಲಘಟ್ಟದಲ್ಲಿ ರೇಷ್ಮೆ ಗೂಡು ಕಳುಹಾಣೆ ಕಡಿಮೆ ಆಗುತ್ತಿರುವುದರ ಬಗ್ಗೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು.

ಶೈಕ್ಷಣಿಕ ಸುಧಾರಣೆ: ಮುಂಬರುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ತಾಲೂಕು ಪ್ರಥಮ ಸ್ಥಾನ ಪಡೆಯಲು ಶಾಲಾ ಪ್ರಧಾನರು ಮತ್ತು ಶಿಕ್ಷಣ ಇಲಾಖೆ ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ನಡೆಸಬೇಕು ಎಂದು ಸೂಚಿಸಿದರು.

ಮೂಲಭೂತ ಸಮಸ್ಯೆಗಳ ಪರಿಹಾರ: ತಾಲೂಕಿನ 32 ಹಳ್ಳಿಗಳ ಕುಡಿಯುವ ನೀರಿನ ಸಮಸ್ಯೆ ಮತ್ತು ನಗರದ ವಿದ್ಯುತ್ ದೀಪಗಳ ದುರಸ್ಥಿ ಸಂಬಂಧಿತ ವಿಭಾಗಗಳ ಗಮನಕ್ಕೆ ತಂದು, ಶೀಘ್ರ ಕ್ರಮ ವಹಿಸಬೇಕೆಂದು ಹೇಳಿದರು. ನಗರಸಭೆ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಸಮಸ್ಯೆಗಳ ಪರಿಹಾರವನ್ನು ಬರುವುದಕ್ಕೆ ಪೌರಾಯುಕ್ತರು ಪ್ರಯತ್ನಿಸಬೇಕು ಎಂದು ಸೂಚಿಸಿದರು.

ಆರೋಗ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಕೃಷಿ, ಕಾರ್ಮಿಕ, ಆಹಾರ ಇಲಾಖೆಗಳ ಪ್ರಗತಿಯ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಲಾಯಿತು. ಹೊರಗುತ್ತಿಗೆ ಆಧಾರದ ನೇಮಕಾತಿಯಲ್ಲಿ ಸ್ಥಳೀಯ ವಿದ್ಯಾವಂತರಿಗೆ ಆದ್ಯತೆ ನೀಡಬೇಕೆಂದು ಶಾಸಕರು ನಿರ್ದೇಶಿಸಿದರು.

“ಪ್ರಾದೇಶಿಕ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಂಡುಹಿಡಿಯುವ ನಿಟ್ಟಿನಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳು ತಮ್ಮ ಅಧಿಕಾರ ವ್ಯಾಪ್ತಿಯಲ್ಲಿ ತುರ್ತು ಕ್ರಮ ಕೈಗೊಳ್ಳಬೇಕು,” ಎಂದು ಅವರು ಹೇಳಿದರು.

ತಾಲ್ಲೂಕು ಪಂಚಾಯತಿ ಇಓ ಹೇಮಾವತಿ.ಆರ್, ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎ. ನರೇಂದ್ರಕುಮಾರ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಆಂಜನೇಯ, ಸರ್ಕಲ್ ಇನ್ಸ್‌ಪೆಕ್ಟರ್ ಎಂ. ಶ್ರೀನಿವಾಸ್, ಕೃಷಿ ಸಹಾಯಕ ನಿರ್ದೇಶಕ ಪಿ.ಆರ್. ರವಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ವೆಂಕಟೇಶ್‌ಮೂರ್ತಿ, ಸಮಾಜ ಕಲ್ಯಾಣ ಸಹಾಯಕ ನಿರ್ದೇಶಕ ಜಗದೀಶ್ ಸೇರಿದಂತೆ ಹಲವಾರು ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.
Captcha verification failed!
CAPTCHA user score failed. Please contact us!
error: Content is protected !!