ಶಿಕ್ಷಕರ ಸಮಸ್ಯೆಗಳ ನಿವಾರಣೆಗೆ ಸಹಕಾರಕ್ಕೆ ಮನವಿ

- Advertisement -
- Advertisement -

Sidlaghatta : ಶಿಡ್ಲಘಟ್ಟ ಕ್ಷೇತ್ರವು ತೀರಾ ಹಿಂದುಳಿದ ಪ್ರದೇಶವಾಗಿದ್ದು ಈ ಕ್ಷೇತ್ರದ ಅಭಿವೃದ್ದಿಗೆ ಎಲ್ಲ ರೀತಿಯ ನೆರವು ನೀಡಬೇಕೆಂದು ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ನೂತನವಾಗಿ ಆಯ್ಕೆಯಾಗಿರುವ ವಿಧಾನಪರಿಷತ್ ಸದಸ್ಯ ಡಿ.ಟಿ.ಶ್ರೀನಿವಾಸ್ ಅವರಲ್ಲಿ ಶಿಡ್ಲಘಟ್ಟ ಕ್ಷೇತ್ರದ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡ ಮನವಿ ಮಾಡಿದರು.

ನೂತನ ಎಮ್ಮೆಲ್ಸಿ ಡಿ.ಟಿ.ಶ್ರೀನಿವಾಸ್ ಅವರನ್ನು ಬೆಂಗಳೂರಿನ ಅವರ ನಿವಾಸದಲ್ಲಿ ಭೇಟಿ ಮಾಡಿ, ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ವಿಧಾನಪರಿಷತ್‌ಗೆ ಆಯ್ಕೆಯಾಗಿದ್ದಕ್ಕೆ ಅಭಿನಂದಿಸಿ ಮಾತನಾಡಿದ ಅವರು ಶಿಡ್ಲಘಟ್ಟವು ಬಯಲುಸೀಮೆಯ ಗಡಿ ಭಾಗದಲ್ಲಿದ್ದು ಅಭಿವೃದ್ದಿಯಿಂದ ಹಿಂದುಳಿದಿದೆ. ಶಿಕ್ಷಕರ ಭವನ(ಗುರು ಭವನ) ಕಟ್ಟಡ ನಿರ್ಮಾಣ ಆಗಬೇಕಿದೆ. ಜತೆಗೆ ಶಿಕ್ಷಕರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದು ಅವೆಲ್ಲವುಗಳ ನಿವಾರಣೆಗೆ ನಿಮ್ಮ ಸಹಕಾರ ಬೇಕೆಂದು ಮನವಿ ಮಾಡಿದರು.

ಡಿ.ಟಿ.ಶ್ರೀನಿವಾಸ್ ದಂಪತಿಗಳನ್ನು ಸನ್ಮಾನಿಸಲಾಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಸಹನಾರಾಜೀವ್‌ಗೌಡ, ಕೆಪಿಸಿಸಿ ಸದಸ್ಯ ಎಲ್.ಮಧುಸೂಧನ್, ಮುಖಂಡರಾದ ದೊಗರನಾಯಕನಹಳ್ಳಿ ವೆಂಕಟೇಶ್, ಇನ್ನಿತರರು ಹಾಜರಿದ್ದರು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here

Captcha verification failed!
CAPTCHA user score failed. Please contact us!