22.9 C
Bengaluru
Friday, December 6, 2024

ಶಿಡ್ಲಘಟ್ಟದಲ್ಲಿ ಗಣರಾಜ್ಯೋತ್ಸವ ಆಚರಣೆ

- Advertisement -
- Advertisement -

Sidlaghatta : ಶಿಡ್ಲಘಟ್ಟ ನಗರದ ನೆಹರು ಕ್ರೀಡಾಂಗಣದಲ್ಲಿ (Nehru Stadium) ಬುಧವಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಗಣರಾಜ್ಯೋತ್ಸವ (Republic Day) ಸಮಾರಂಭದಲ್ಲಿ ಶಾಸಕ ವಿ.ಮುನಿಯಪ್ಪ ಮಾತನಾಡಿದರು.

ಮಹಾನ್‌ ವ್ಯಕ್ತಿಗಳು ಪರಿಶ್ರಮದಿಂದ ಕಟ್ಟಿ ಬೆಳೆಸಿರುವ ಭಾರತದ ಭವಿಷ್ಯವನ್ನು ಇನ್ನೂ ಎತ್ತರಕ್ಕೆ ಕೊಂಡೊಯ್ಯುವ ಜವಾಬ್ದಾರಿ ಯುವ ಜನತೆಯ ಮುಂದಿದೆ ಎಂದು ಅವರು ತಿಳಿಸಿದರು.

ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ. ಡಾ.ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರು ನೀಡಿರುವ ಭಾರತದ ಸಂವಿಧಾನದ ಆಶಯಗಳನ್ನು ಅರಿತು ಅದರಂತೆ ನಡೆಯುವುದು ಇಂದಿನ ತುರ್ತು ಅಗತ್ಯ. ಈ ಬಗ್ಗೆ ಪ್ರತಿಯೊಬ್ಬರು ಎಚ್ಚರ ವಹಿಸಿದರೆ ದೇಶದ ಅಭಿವೃದ್ಧಿ, ಐಕ್ಯತೆ, ಸಮಗ್ರತೆ ತಾನಾಗಿಯೆ ಆಗುತ್ತದೆ ಎಂದರು.

ತಹಶೀಲ್ದಾರ್ ಬಿ.ಎಸ್.ರಾಜೀವ್ ಮಾತನಾಡಿ, ಗಣತಂತ್ರ ವ್ಯವಸ್ಥೆಯ ಚೌಕಟ್ಟಿನಲ್ಲಿ, ಜಾತ್ಯತೀತ ಮೌಲ್ಯಗಳ ಪರಧಿಯಲ್ಲಿ ಮತ್ತು ಭ್ರಾತೃತ್ವದ ಬೆಸುಗೆಯಲ್ಲಿ ಸತ್ಯ,ನಿಷ್ಠೆ, ಪ್ರಾಮಾಣಿಕತೆಯಿಂದ ರಾಷ್ಟ್ರೀಯ ಭಾವೈಕ್ಯತೆಯನ್ನು ಸಾಕಾರಗೊಳಿಸಲು ಮತ್ತಷ್ಟು ಸಾಂಘಿಕವಾಗಿ ಶ್ರಮಿಸೋಣ. ತನ್ಮೂಲಕ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಆದರ್ಶಗಳನ್ನು ಎತ್ತಿ ಹಿಡಿಯೋಣ ಎಂದರು.

ನಗರಸಭೆ ಅಧ್ಯಕ್ಷೆ ಸುಮಿತ್ರ ರಮೇಶ್, ಉಪಾಧ್ಯಕ್ಷ ಅಫ್ಸರ್ ಪಾಷ, ಸದಸ್ಯರಾದ ಅನಿಲ್ ಕುಮಾರ್, ಕೃಷ್ಣಮೂರ್ತಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬಿ.ಸಿ.ನಂದೀಶ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ ಹಾಜರಿದ್ದರು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -
error: Content is protected !!