Home Sidlaghatta ಶಿಡ್ಲಘಟ್ಟದ 8 ವಿದ್ಯಾರ್ಥಿಗಳಿಗೆ ಸ್ಕೌಟ್ಸ್ & ಗೈಡ್ಸ್ ರಾಜ್ಯ ಪ್ರಶಸ್ತಿ

ಶಿಡ್ಲಘಟ್ಟದ 8 ವಿದ್ಯಾರ್ಥಿಗಳಿಗೆ ಸ್ಕೌಟ್ಸ್ & ಗೈಡ್ಸ್ ರಾಜ್ಯ ಪ್ರಶಸ್ತಿ

0

Sidlaghatta: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಸ್ಥೆಯ ರಾಜ್ಯ ಪುರಸ್ಕಾರ ಪ್ರಶಸ್ತಿಗೆ ತಾಲ್ಲೂಕಿನ ಎಂಟು ಮಂದಿ ಬುಲ್ ಬುಲ್ ಮತ್ತು ಸ್ಕೌಟ್ಸ್ ವಿದ್ಯಾರ್ಥಿಗಳು ಆಯ್ಕೆಯಾಗಿದ್ದು, ಮಾರ್ಚ್ 17ರಂದು ರಾಜಭವನದ ಗಾಜಿನ ಮನೆಯಲ್ಲಿ ರಾಜ್ಯಪಾಲರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಬಿಜಿಎಸ್ ಶಾಲೆಯ ಬುಲ್ ಬುಲ್‌ಗಳಾದ ಪಿ.ಆಧ್ಯಗೌಡ, ಜಿ.ಎಸ್.ಸೌಹಾರ್ಧ, ವಿ.ವೆನ್ನಲ, ಎ.ಪಿ.ಲಕ್ಷಿತ ಹಾಗೂ ಸಿಜನ್ ಶಾಲೆಯ ಸ್ಕೌಟ್ಸ್‌ಗಳಾದ ಹರ್ಷಿತ, ಕಾರ್ತಿಕ್, ಮುಸ್ತಫ, ಜಂಗಮಕೋಟೆ ಸರಕಾರಿ ಪ್ರೌಢಶಾಲೆಯ ಕೆ.ಎಸ್.ದುಶ್ಯಂತ್ ರಾಜ್ಯ ಪುರಸ್ಕಾರ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಜಿಲ್ಲೆಯಿಂದ ಒಟ್ಟು 20 ಬುಲ್ ಬುಲ್ ಮತ್ತು ಸ್ಕೌಟ್ಸ್ ವಿದ್ಯಾರ್ಥಿಗಳು ರಾಜ್ಯ ಪುರಸ್ಕಾರಕ್ಕೆ ಆಯ್ಕೆಯಾಗಿದ್ದು, ಈ ಪೈಕಿ ಶಿಡ್ಲಘಟ್ಟ ತಾಲ್ಲೂಕಿನ 8 ವಿದ್ಯಾರ್ಥಿಗಳು ಆಯ್ಕೆಯಾಗಿ ಗೌರವ ಗಳಿಸಿದ್ದಾರೆ.

ರಾಜಭವನದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಕಾರ್ಯದರ್ಶಿ ಸಿ.ಬಿ.ಪ್ರಕಾಶ್ ತಿಳಿಸಿದ್ದಾರೆ.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version