Sidlaghatta : ಶಿಡ್ಲಘಟ್ಟ ಟೌನ್ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ (SFCS) ಆಡಳಿತ ಮಂಡಳಿಯ ನಿರ್ದೇಶಕರುಗಳ ಸ್ಥಾನಗಳಿಗೆ ಡಿಸೆಂಬರ್ 26ರ ಭಾನುವಾರ Election ನಡೆಯಲಿದ್ದು ನಾಮಪತ್ರಗಳ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಮೊದಲ ದಿನ 11 ನಾಮಪತ್ರಗಳ ಸಲ್ಲಿಕೆಯಾಗಿದೆ.
ಈ ಹಿಂದೆ ಡಿಸಿಸಿ ಬ್ಯಾಂಕ್ ಆರ್ಥಿಕವಾಗಿ ದಿವಾಳಿಯಾಗಿದ್ದು ಆಗ ನಡೆಯುತ್ತಿದ್ದ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಸಲು ಹಿಂದು ಮುಂದು ನೋಡುವಂತಾಗಿತ್ತು. ಚುನಾವಣೆ ನಡೆಸಲು ಸಹ ಬ್ಯಾಂಕ್‌ನಲ್ಲಿ ಹಣವಿಲ್ಲದಷ್ಟು ದಿವಾಳಿಯಾಗಿತ್ತು.
ಆದರೀಗ ಪರಿಸ್ಥಿತಿ ಬದಲಾಗಿದ್ದು ಕೋಟಿ ಕೋಟಿ ವ್ಯವಹಾರ ನಡೆಯುತ್ತಿರುವುದರಿಂದ ನಿರ್ದೇಶಕರುಗಳ ಸ್ಥಾನಕ್ಕೆ ಪೈಪೋಟಿಯೂ ಹೆಚ್ಚಿದೆ. ಕಾಂಗ್ರೆಸ್, ಜೆಡಿಎಸ್, ಬಿಜೆಪಿ ನಡುವೆ ಪೈಪೋಟಿ ನಡೆಯಲಿದೆ.
ಗುರುವಾರದಿಂದ ಶನಿವಾರದವರೆಗೂ ನಾಮಪತ್ರ ಸಲ್ಲಿಸಲು ಅವಕಾಶವಿದ್ದು ಮೊದಲ ದಿನ ಗುರುವಾರವೇ 11 ನಾಮಪತ್ರಗಳು ಸಲ್ಲಿಕೆಯಾಗಿವೆ.
ಡಿಸೆಂಬರ್ 26 ಭಾನುವಾರ ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೂ ಶಿಡ್ಲಘಟ್ಟದ ಕೋಟೆ ವತ್ತದಲ್ಲಿನ ಸರಕಾರಿ ಬಾಲಕರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತದಾನ ನಡೆಯಲಿದೆ.
ಡಿಸೆಂಬರ್ 19ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಅರ್ಹ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುವುದು. ಡಿಸೆಂಬರ್ 20 ರಂದು ನಾಮಪತ್ರ ವಾಪಸ್ ಪಡೆಯಲು ಕಡೆಯ ದಿನವಾಗಿರುತ್ತದೆ.
ಆಡಳಿತ ಮಂಡಳಿಯ 12 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು ಸಾಲಗಾರರಲ್ಲದ ಕ್ಷೇತ್ರದಿಂದ 1, ಠೇವಣಿದಾರರ ಕ್ಷೇತ್ರದಿಂದ 1, ಸಾಲಗಾರರ ಕ್ಷೇತ್ರದಿಂದ 4, ಪರಿಶಿಷ್ಟ ಜಾತಿ 1, ಪರಿಶಿಷ್ಟ ಪಂಗಡ 1, ಹಿಂದುಳಿದ ವರ್ಗ ಮೀಸಲು ಪ್ರವರ್ಗ ಎ ಯಿಂದ1, ಬಿ ಯಿಂದ1 ಹಾಗೂ ಮಹಿಳಾ ಮೀಸಲು ಕ್ಷೇತ್ರದಿಂದ 2 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.