Monday, October 2, 2023
HomeSidlaghattaಸಿದ್ದರಾಮಯ್ಯ, ಡಿಕೆಶಿಗೆ Congress ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ

ಸಿದ್ದರಾಮಯ್ಯ, ಡಿಕೆಶಿಗೆ Congress ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ

- Advertisement -
- Advertisement -
- Advertisement -
- Advertisement -

Jangamakote, Sidlaghatta : ದಾವಣಗೆರೆಯಲ್ಲಿ ಸಿದ್ದರಾಮೋತ್ಸವ ಅಭೂತಪೂರ್ವ ಯಶಸ್ವಿ ಕಂಡ ನಂತರ ಚಿಂತಾಮಣಿ ವಿಧಾನಸಭಾ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ 75ನೇ ಅಮೃತ ಮಹೋತ್ಸವದ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಬಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹಾಗೂ KPCC ಅಧ್ಯಕ್ಷ ಡಿ.ಕೆ.ಶಿವಕುಮಾರ್ (D. K. Shivakumar) ಅವರಿಗೆ ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆಯಲ್ಲಿ Congress ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತ ಕೋರಿದರು.

ಜಂಗಮಕೋಟೆ ವೃತ್ತದಲ್ಲಿ ಇಬ್ನರು ನಾಯಕರ‌ ವಾಹನವನ್ನು ನಿಲ್ಲಿಸಿ ಮಾಲಾರ್ಪಣೆ ಮತ್ತು ಪುಷ್ಪಾರ್ಚನೆ ಮಾಡುವ ಮೂಲಕ ಅಭಿಮಾನವನ್ನು ಮೆರೆದಿದರಲ್ಲದೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಕೆಶಿ ಅವರ ಪರವಾಗಿ ಜೈಕಾರದ ಘೋಷಣೆಗಳು ಮೊಳಗಿದವು.

ನಂತರ ಎಚ್. ಕ್ರಾಸ್ ನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಸಹ ಅದ್ದೂರಿಯಾಗಿ ಸ್ವಾಗತಿಸಿ ಸಂಭ್ರಮಿಸಿದರು. ಇಬ್ಬರು ನಾಯಕರ ಪರವಾಗಿ ಜೈಕಾರದ ಘೋಷಣೆಗಳು ಕೂಗಿದ ಅಭಿಮಾನಿಗಳು ಸೇಬಿನ ಹಾರ ಹಾಕಿ ಅಭಿನಂದಿಸಿದರು.

ಎಚ್. ಕ್ರಾಸ್ ಮಾರ್ಗದ ಮೂಲಕ ಚಿಂತಾಮಣಿ ತಾಲ್ಲೂಕಿನ ಕೈವಾರಕ್ಕೆ ಕೆಪಿಸಿಸಿ ಅಧ್ಯಕ್ಷರು ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೆರಳಿದರು. ದಾರಿಯುದ್ದಕ್ಕೂ ಕಾಂಗ್ರೆಸ್ ಕಾರ್ಯಕರ್ತರು ಜೈಕಾರದ ಘೋಷಣೆಗಳು ಕೂಗಿದರಲ್ಲದೆ ಇಬ್ಬರೂ ನಾಯಕರು ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಭಿಮಾನಿಗಳಿಗೆ ಹಸ್ತಲಾಘವ ಮಾಡುವ ಮೂಲಕ ಅಭಿಮಾನಕ್ಕೆ ಕೃತಜ್ಞತೆ ಸಲ್ಲಿಸಿದರು.

ಶಿಡ್ಲಘಟ್ಟ ಶಾಸಕ ವಿ. ಮುನಿಯಪ್ಪ, ಗೌರಿಬಿದನೂರು ಶಾಸಕ ಎನ್.ಎಚ್.ಶಿವಶಂಕರ ರೆಡ್ಡಿ, ಶ್ರೀನಿವಾಸಪುರ ಶಾಸಕ ರಮೇಶ್ ಕುಮಾರ್, ಬಾಗೇಪಲ್ಲಿ ಮಾಜಿ ಶಾಸಕ ಎನ್.ಸಂಪಂಗಿ, ಚಿಂತಾಮಣಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಡಾ.ಎಂ.ಸಿ.ಸುಧಾಕರ್ ರೆಡ್ಡಿ, ವಿಧಾನ ಪರಿಷತ್ ಸದಸ್ಯ ನಾರಾಯಣಸ್ವಾಮಿ, ಎಸ್.ಎನ್.ಕ್ರಿಯಾ ಟ್ರಸ್ಟ್ ಅಧ್ಯಕ್ಷ ಆಂಜಿನಪ್ಪ ಪುಟ್ಟು, ಕೋಚಿಮುಲ್ ಮಾಜಿ ಅಧ್ಯಕ್ಷ ಕೆ.ಗುಡಿಯಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಎಂ.ಮುನಿಯಪ್ಪ, ಅಶ್ವತ್ಥ ಗೌಡ, ದೇವರಾಜ್, ಡಿ.ಬಿ.ಚನ್ನಕೃಷ್ಣಪ್ಪ, ತಮ್ಮಣ್ಣ, ನಾಗೇಶ್, ಬಸಪ್ಪ ,ಮುನಿ ಆಂಜನೇಯ, ಸುರೇಶ್ ಹಾಜರಿದ್ದರು.

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶
https://www.youtube.com/c/sidlaghatta

Website 🌐
http://www.sidlaghatta.com

📱 Join Telegram
https://t.me/Sidlaghatta

- Advertisement -
RELATED ARTICLES
- Advertisment -

Most Popular

error: Content is protected !!