19.3 C
Bengaluru
Monday, December 30, 2024

ಗ್ರಾಮಗಳಲ್ಲಿ SKDRDP ಸಾಮಾನ್ಯ ಸೇವಾಕೇಂದ್ರ

- Advertisement -
- Advertisement -

Sidlaghatta : ಶಿಡ್ಲಘಟ್ಟ ನಗರದ ಮುತ್ತೂರು ಬೀದಿಯಲ್ಲಿನ ಧರ್ಮಸ್ಥಳ ಗ್ರಾಮಾಭಿವೃದ್ಧಿ (SKDRDP) ಯೋಜನಾ ಕಚೇರಿಯಲ್ಲಿ, ಗ್ರಾಮ ಮಟ್ಟದಲ್ಲಿ ಸಾಮಾನ್ಯ ಸೇವಾಕೇಂದ್ರದಲ್ಲಿ (CSC) ಕರ್ತವ್ಯ ನಿರ್ವಹಿಸಲು ಆಯ್ಕೆಯಾಗಿರುವ 31 ಮಂದಿ ಯುವಕ ಯುವತಿಯರಿಗೆ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ತಹಶೀಲ್ದಾರ್ ಬಿ.ಎಸ್.ರಾಜೀವ್ (Tahsildar B. Rajiv) ಮಾತನಾಡಿದರು.

ಸರ್ಕಾರದ ಸೌಲಭ್ಯಗಳು ಜನಸಾಮಾನ್ಯರಿಗೆ ಸುಲಭವಾಗಿ ಸಿಗುವಂತಾಗಲಿ ಎಂಬ ಸದುದ್ದೇಶದಿಂದ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಕಚೇರಿಗಳಲ್ಲಿ ಸಾಮಾನ್ಯ ಸೇವಾ ಕೇಂದ್ರಗಳನ್ನು ಪ್ರಾರಂಭಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

ಧರ್ಮಸ್ಥಳ ಸಂಸ್ಥೆಯ ನೂರಾರು ಜನೋಪಯೋಗಿ ಕಾರ್ಯಕ್ರಮಗಳನ್ನು ಅತ್ಯಂತ ಪಾರದರ್ಶಕವಾಗಿ ಅನುಷ್ಟಾನಗೊಳಿಸಿದೆ. ಅದರ ಫಲವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮಹತ್ತರ ಯೋಜನೆಗಳನ್ನು ನಗರ ಹಾಗೂ ಗ್ರಾಮ ಮಟ್ಟದಲ್ಲಿ ಅನುಷ್ಟಾನ ಮಾಡುವ ಮಹತ್ತರ ಜವಾಬ್ದಾರಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಕೇಂದ್ರ ಸರ್ಕಾರ ನೀಡಿದೆ.

ಧರ್ಮಸ್ಥಳ ಸಂಸ್ಥೆ ತಾಲ್ಲೂಕಿನಲ್ಲಿ ಹಲವಾರು ರೀತಿಯ ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುತ್ತಿದೆ. ಇವರ ಕಾರ್ಯ ನಿಜಕ್ಕೂ ಅಭಿನಂದನೀಯ. ಸೇವಾ ಕೇಂದ್ರದ ನಿರ್ವಹಣೆಗೆ ಆಯ್ಕೆಯಾದ ಯುವ ಜನರು ಜನರಿಗೆ ಮಾರ್ಗದರ್ಶಕರಾಗಬೇಕು, ಸರ್ಕಾರದ ಸವಲತ್ತುಗಳನ್ನು ವಿವರಿಸಬೇಕು. ಸುಮಾರು 700 ರೀತಿಯ ಸೌಲಭ್ಯಗಳನ್ನು ನೀಡಲು ತರಬೇತಿ ನೀಡುತ್ತಿದ್ದು, ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸಬೇಕು ಎಂದರು.

 ಜಿಲ್ಲಾ ನಿರ್ದೆಶಕ ಸಿ.ಎಸ್.ಪ್ರಶಾಂತ್ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮಹತ್ತರ ಜನೋಪಯೋಗಿ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ರಾಜ್ಯಾದಾದ್ಯಂತ 6000 ಸಾಮಾನ್ಯ ಸೇವಾಕೇಂದ್ರಗಳನ್ನು ತೆರೆಯಲಾಗಿದೆ. ಇದರಲ್ಲಿ ಶಿಡ್ಲಘಟ್ಟ ತಾಲ್ಲೂಕಿನಲ್ಲಿ 31 ಕೇಂದ್ರಗಳನ್ನು ತೆರೆಯುತ್ತಿದ್ದು, ಸರ್ಕಾರದ ಸೌಲಭ್ಯಗಳನ್ನು ಜನ ಸಾಮಾನ್ಯರಿಗೆ ತಲುಪಿಸುವುದೇ ಮುಖ್ಯ ಉದ್ದೇಶವಾಗಿದೆ. ಜನಸಾಮಾನ್ಯರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಹೇಳಿದರು.

 ನಗರಸಭೆ ಪೌರಾಯುಕ್ತ ಶ್ರೀಕಾಂತ್ ಮಾತನಾಡಿ, ತರಬೇತಿ ಪಡೆದುಕೊಂಡ ಸಿಬ್ಬಂದಿಗಳು ಸೇವಾ ಮನೋಭಾವನೆಯಿಂದ ಕರ್ತವ್ಯ ನಿರ್ವಹಿಸಬೇಕು. ಸರ್ಕಾರದ ಸೌಲಭ್ಯಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ತಲುಪಿಸುವಂತಹ ಸುವರ್ಣ ಅವಕಾಶ ಧರ್ಮಸ್ಥಳ ಸಂಸ್ಥೆ ನಿಮಗೆ ನೀಡಿದ್ದು ಈ ಅವಕಾಶವನ್ನು ಉತ್ತಮ ರೀತಿಯಲ್ಲಿ ಬಳಸಿಕೊಳ್ಳಿ ಎಂದು ಆಯ್ಕೆಯಾದ ಸಿಬ್ಬಂದಿಗೆ  ಕಿವಿ ಮಾತು ಹೇಳಿದರು.

 ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಎ.ಎಂ.ತ್ಯಾಗರಾಜ್ ಮಾತನಾಡಿ, ಜಿಲ್ಲೆಯಲ್ಲಿಯೇ ಶಿಡ್ಲಘಟ್ಟ ತಾಲ್ಲೂಕಿನ ಸಾಮಾನ್ಯ ಸೇವಾಕೇಂದ್ರದ ಸಿಬ್ಬಂದಿ ಹೆಚ್ಚು ಕಾರ್ಯಕ್ಷಮತೆ ಮತ್ತು ಸೇವಾ ಮನೋಭಾವದಿಂದ ಕೆಲಸ ನಿರ್ವಹಿಸಬೇಕು. ಹೆಚ್ಚು ಮಂದಿಗೆ ಸೇವೆ ನೀಡಿದ ಮೊದಲ ಮೂವರನ್ನು ಜಿಲ್ಲಾ ಜನಜಾಗೃತಿ ವೇದಿಕೆ ವತಿಯಿಂದ ಸನ್ಮಾನಿಸಲಾಗುವುದು ಎಂದರು.

 ಬೆಳ್ತಂಗಡಿ ತರಬೇತಿ ಸಂಸ್ಥೆಯ ಉಪನ್ಯಾಸಕ ರಾಜೇಶ್ ಮತ್ತು ಸಿ ಎಸ್ ಸಿ ಜಿಲ್ಲಾ ಸಮನ್ವಯಾಧಿಕಾರಿ ಸುನಿಲ್ ರವರು ಸಿಬ್ಬಂದಿಗೆ ತರಬೇತಿ ನೀಡಿದರು.

 ಯೋಜನಾಧಿಕಾರಿ ಪ್ರಕಾಶ್ ಕುಮಾರ್, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ತ್ಯಾಗರಾಜ್, ಹಿತ್ತಲಹಳ್ಳಿ ಸುರೇಶ್, ಜಿಲ್ಲಾ ನೋಡಲ್ ಅಧಿಕಾರಿ ಅರುಣ್, ಸುಮನ್, ಅನಿಲ್, ನವೀನ್, ದಿನೇಶ್, ಶ್ರೀನಿವಾಸ್ ಹಾಗೂ 31 ಮಂದಿ ಸಿಬ್ಬಂದಿ ಹಾಜರಿದ್ದರು.

- Advertisement -
Latest news
- Advertisement -
Related news
- Advertisement -
error: Content is protected !!