Sidlaghatta : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಇಡೀ ಕರ್ನಾಟಕದಾದ್ಯಂತ ಗಿಡ ನಾಟಿ ಮತ್ತು ಪರಿಸರ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಪ್ರತಿ ತಾಲ್ಲೂಕಿನಲ್ಲಿ ಪ್ರತಿ ವರ್ಷ 5000 ಗಿಡ ನಾಟಿ ಮಾಡಲಾಗುತ್ತಿದೆ ಎಂದು ಶ್ರೀ॒ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ಸಿ.ಎಸ್.ಪ್ರಶಾಂತ್ ತಿಳಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಗರದ ಡಾಲ್ಫಿನ್ ಕಾಲೇಜಿನಲ್ಲಿ ಗಿಡ ನಾಟಿ ಮಾಡಿ, ಪರಿಸರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪರಿಸರ ನಾಶದಿಂದಗುವ ದುಷ್ಟಪರಿಣಾಮಗಳ ಬಗ್ಗೆ ಎಚ್ಚರಿಕೆ ವಹಿಸಬೇಕಿದೆ. ಮುಂದಿನ ಪೀಳಿಗೆಯ ನೆಮ್ಮದಿಗಾಗಿ ಈ ದಿನ ನಾವು ಗಿಡಮರಗಳನ್ನು ಹೆಚ್ಚೆಚ್ಚು ಬೆಳೆಸಬೇಕಿದೆ ಎಂದರು.
ಡಾಲ್ಫಿನ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ನೂರ್ ಜಾನ್ ಮಾತನಾಡಿ, ಪರಿಸರ ಸಂರಕ್ಷಣೆಯು ಪ್ರತಿಯೊಬ್ಬ ವ್ಯಕ್ತಿಯ ಕರ್ತವ್ಯ. ಇಂತಹ ಕಾರ್ಯಕ್ರಮವನ್ನು ನಮ್ಮ ಕಾಲೇಜಿನಲ್ಲಿ ನಡೆಸುತಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಧನ್ಯವಾದಗಳು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ತಾಲ್ಲೂಕಿನ ಯೋಜನಾಧಿಕಾರಿ ಎಸ್. ಸುರೇಶ್ ಗೌಡ, ಕೃಷಿ ಮೇಲ್ವಿಚಾರಕ ರಾಜೇಶ್, ಉಪನ್ಯಾಸಕ ಮೋಹನ್, ಸೇವಾಪ್ರತಿನಿಧಿ ಮಂಜುಳ, ಪದ್ಮ ಹಾಗೂ ಕಾಲೇಜಿನ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.