Friday, March 29, 2024
HomeSidlaghattaವೃತ್ತಿಶಿಕ್ಷಣ ಮಾಡುವ ವಿದ್ಯಾರ್ಥಿಗಳಿಗೆ ಶಿಷ್ಯವೇತನ

ವೃತ್ತಿಶಿಕ್ಷಣ ಮಾಡುವ ವಿದ್ಯಾರ್ಥಿಗಳಿಗೆ ಶಿಷ್ಯವೇತನ

- Advertisement -
- Advertisement -
- Advertisement -
- Advertisement -

Sidlaghatta : ಶ್ರೀ ಕ್ಷೇತ್ರ ಧರ್ಮಸ್ಥಳ ಸಂಸ್ಥೆಯ (SKDRDP) ಶಿಡ್ಲಘಟ್ಟ ತಾಲ್ಲೂಕು ಯೋಜನಾ ಕಚೇರಿಯಲ್ಲಿ ಮಂಗಳವಾರ ತಾಲ್ಲೂಕಿನ 30 ಮಂದಿ ವೃತ್ತಿ ಪರ ಕೋರ್ಸ್ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 2022-2023 ನೇ ಸಾಲಿನಲ್ಲಿ ಸಂಸ್ಥೆಯ ವತಿಯಿಂದ ಸುಜ್ಞಾನನಿಧಿ (Sugnana Nidhi) ಶಿಷ್ಯವೇತನದ ಮಂಜೂರಾತಿ ಪತ್ರವನ್ನು ವಿತರಿಸಿ ಜಿಲ್ಲಾ ನಿರ್ದೇಶಕ ಸಿ.ಎಸ್.ಪ್ರಶಾಂತ್ ಅವರು ಮಾತನಾಡಿದರು.

ಉತ್ತಮ ನಾಗರಿಕ ಸಮಾಜ ನಿರ್ಮಾಣ ಮಾಡಲು ಅತ್ಯಗತ್ಯವಾದದ್ದು ಶಿಕ್ಷಣ ಮತ್ತು ಆರೋಗ್ಯ. ಶಿಕ್ಷಣಕ್ಕೆ ಪೂರಕವಾಗಿ ಬಡ ದುರ್ಬಲ ವರ್ಗದ ಪ್ರತಿಭಾವಂತ ಮಕ್ಕಳು ತಮ್ಮ ಬಡತನದಿಂದ ಉನ್ನತ ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ದೃಷ್ಟಿಯಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯಿಂದ ವೃತ್ತಿಶಿಕ್ಷಣ ಮಾಡುತ್ತಿರುವ ಒಳ್ಳೆಯ ಅಂಕಗಳನ್ನು ಪಡೆದಿರುವ ವಿದ್ಯಾರ್ಥಿಗಳನ್ನು ಗುರುತಿಸಿ ಶಿಷ್ಯವೇತನವನ್ನು ನೀಡುತ್ತಿದ್ದು ಇದು ಗ್ರಾಮೀಣ ವಿದ್ಯಾರ್ಥಿಗಳಿಗೆ ಅತ್ಯಂತ ಪ್ರಯೋಜನಕಾರಿಯಾಗಿದೆ ಎಂದು ಅವರು ತಿಳಿಸಿದರು.

ಧರ್ಮಸ್ಥಳ ಸಂಸ್ಥೆ ಪೂಜ್ಯರ ಮಾರ್ಗದರ್ಶನದಲ್ಲಿ ನೂರಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುತ್ತಿದ್ದು ಬಹಳ ಮುಖ್ಯವಾಗಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಒತ್ತು ನೀಡಲಾಗಿದೆ. ಈ ವರ್ಷ ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಸಂಸ್ಥೆಯಿಂದ 30 ವಿದ್ಯಾರ್ಥಿಗಳಿಗೆ ರೂ 8,54,000 ಮೊತ್ತದ ಶಿಷ್ಯವೇತನ ಮಂಜೂರಾಗಿದೆ ಎಂದರು. ಅದೇ ರೀತಿ ಸಂಘದ ಸದಸ್ಯರಿಗೆ ಆರೋಗ್ಯ ರಕ್ಷಾ ವಿಮೆಯನ್ನು ಮಾಡಿದ್ದು ಒಟ್ಟು 38 ಮಂದಿ ಅನಾರೋಗ್ಯ ಪೀಡಿತ ಸದಸ್ಯರಿಗೆ 2,95,000 ವಿಮಾ ಮೊತ್ತ ಮಂಜೂರಾಗಿದ್ದು ಈ ದಿನ ವಿತರಣೆ ಮಾಡಲಾಗಿದೆ ಎಂದರು.

ಜನಜಾಗೃತಿ ವೇದಿಕೆ ಸದಸ್ಯ ಎ.ಎಂ.ತ್ಯಾಗರಾಜ್ ಮಾತನಾಡಿ, ಧರ್ಮಸ್ಥಳ ಸಂಸ್ಥೆ ಸದಸ್ಯರಿಗೆ ಕೇವಲ ಅರ್ಥಿಕ ಸಹಕಾರ ನೀಡುವುದು ಮಾತ್ರವಲ್ಲದೇ ವ್ಯವಹಾರದ ಶಿಸ್ತು, ಸಂಸಾರ ನಿರ್ವಹಣೆ ಹಾಗೂ ಸಂಸ್ಕಾರಯುತ ಜೀವನ ಮೌಲ್ಯಗಳನ್ನು ಕಲಿಸಿಕೊಡುತ್ತಿದೆ. ಸಂಸ್ಥೆಯ ಹತ್ತು ಹಲವಾರು ಕಾರ್ಯಕ್ರಮಗಳು ಸಮಾಜದ ದುರ್ಬಲ ವರ್ಗದವರಿಗೆ ಆಶಾಕಿರಣವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ಹಿತ್ತಲಹಳ್ಳಿ ಸುರೇಶ್, ಬೋದಗೂರು ವೆಂಕಟಸ್ವಾಮಿ ರೆಡ್ಡಿ, ತಾಲ್ಲೂಕು ಯೋಜನಾಧಿಕಾರಿ ಪ್ರಕಾಶ್ ಕುಮಾರ್, ಮೇಲ್ವಿಚಾರಕ ನವೀನ್, ಹಣಕಾಸು ಪ್ರಭಂದಕ ಕಿರಣ್ ಹಾಜರಿದ್ದರು.

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶
https://www.youtube.com/c/sidlaghatta

Website 🌐
http://www.sidlaghatta.com

📱 Join Telegram
https://t.me/Sidlaghatta

- Advertisement -
RELATED ARTICLES
- Advertisment -

Most Popular

error: Content is protected !!