ರಾಯರ 352 ನೇ ಆರಾಧನಾ ಮಹೋತ್ಸವ

- Advertisement -
- Advertisement -

Sidlaghatta : ಶಿಡ್ಲಘಟ್ಟ ನಗರದ ಮುತ್ತೂರು ಬೀದಿಯ ರಾಘವೇಂದ್ರಸ್ವಾಮಿ ಮಠದಲ್ಲಿ ರಾಯರ 351 ನೇ ಆರಾಧನಾ ಮಹೋತ್ಸವವನ್ನು ಶ್ರದ್ಧಾ ಭಕ್ತಿಯಿಂದ ಶುಕ್ರವಾರ ಆಚರಿಸಲಾಯಿತು.

ಈ ಸಂದರ್ಭದಲ್ಲಿ ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಮೂರು ದಿನಗಳ ಕಾಲ ನಡೆಸುವ ಆರಾಧನಾ ಮಹೋತ್ಸವವು ಗುರುವಾರ ಪ್ರಾರಂಭವಾಯಿತು. ಸುಪ್ರಭಾತ ಸೇವೆ, ಪಂಚಾಮೃತ ಅಭಿಷೇಕ, ಸಹಸ್ರನಾಮಾರ್ಚನೆ, ಹಸ್ತೋದಕ, ಮಹಾಮಂಗಳಾರತಿ ನಡೆಯಿತು. ರಾಯರಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಸುಪ್ರಭಾತ ಸೇವೆ, ಪಂಚಾಮೃತ ಅಭಿಷೇಕ, ಸಹಸ್ರ ನಾಮಾರ್ಚನೆ, ಉತ್ಸವವನ್ನು ನೆರವೇರಿಸಲಾಯಿತು. ಗುರುವಾರ ಸಂಜೆ ಶಾಸ್ತ್ರೀಯ ಸಂಗೀತ ಕಚೇರಿಯನ್ನು ಆಯೋಜಿಸಲಾಗಿತ್ತು.

ಶುಕ್ರವಾರ ತೀರ್ಥಪ್ರಸಾದ ವಿನಿಯೋಗಿಸಿದ ನಂತರ ನಗರದ ಪ್ರಮುಖ ರಸ್ತೆಗಳಲ್ಲಿ ರಾಯರ ಮೆರವಣಿಗೆಯನ್ನು ಆಯೋಜಿಸಲಾಗಿತ್ತು. ಉತ್ಸವ ಮೂರ್ತಿಗೆ ಭಕ್ತರು ಪೂಜೆ ಸಲ್ಲಿಸಿದರು. ಮೆರವಣಿಗೆ ಹಾದು ಹೋದ ರಸ್ತೆಗಳನ್ನು ಸಾರಿಸಿ ರಂಗವಲ್ಲಿ ಹಾಕಿ ಉತ್ಸವಕ್ಕೆ ಸ್ವಾಗತ ಕೋರಲಾಗಿತ್ತು.

ದೇವಾಲಯದ ಆವರಣದಲ್ಲಿ ರಾಘವೇಂದ್ರ ಸೇವಾ ಟ್ರಸ್ಟ್ ವತಿಯಿಂದ ಸಾಮೂಹಿಕ ಅನ್ನಸಂತರ್ಪಣೆಯನ್ನು ನಡೆಸಲಾಯಿತು.

ರಾಘವೇಂದ್ರ ಸೇವಾ ಟ್ರಸ್ಟ್ ಅಧ್ಯಕ್ಷ ಎಸ್.ವಿ.ನಾಗರಾಜರಾವ್, ಬ್ರಾಹ್ಮಣ ಸಂಘದ ತಾಲ್ಲೂಕು ಅಧ್ಯಕ್ಷ ಎ.ಎಸ್.ರವಿ, ಮುಖಂಡರಾದ ಎನ್.ಶ್ರೀಕಾಂತ್, ವಿ.ಕೃಷ್ಣ, ಬಿ.ಕೃಷ್ಣಮೂರ್ತಿ, ಬಿ.ಆರ್.ನಟರಾಜ್, ಕೆ.ಮಂಜುನಾಥ, ಮಧುಸೂದನ್, ಎ.ಎಸ್.ಹರೀಶ್,ೆ.ಎಸ್.ಉದಯ್, ಎ.ಎಸ್.ಸತೀಶ್, ಎಸ್.ಆರ್.ಶ್ರೀನಿವಾಸಮೂರ್ತಿ, ಸುಂದರನ್ ಹಾಜರಿದ್ದರು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!