Sidlaghatta : ಮುಂಬರುವ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾಗಲಿರುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿಡ್ಲಘಟ್ಟ ತಾಲ್ಲೂಕು ಶಾಲಾ ಶಿಕ್ಷಣ ಇಲಾಖೆ ಹಾಗೂ ತಾಲ್ಲೂಕು ಪ್ರೌಢಶಾಲಾ ಸಹಶಿಕ್ಷಕರ ಸಂಘದ ಆಶ್ರಯದಲ್ಲಿ ಮಾರ್ಚ್ 11ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30ರವರೆಗೆ ಜೂಮ್ ಲಿಂಕ್ ಮೂಲಕ ಸಂಪನ್ಮೂಲ ವ್ಯಕ್ತಿಗಳೊಂದಿಗೆ ವೀಡಿಯೋ ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎ.ನರೇಂದ್ರಕುಮಾರ್ ತಿಳಿಸಿದ್ದಾರೆ.
ಈ ಸಂವಾದ ಕಾರ್ಯಕ್ರಮದಲ್ಲಿ ವಿಷಯವಾರು ತಜ್ಞರು ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಲಿದ್ದು, ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಪ್ರೌಢಶಾಲೆಗಳ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸುವಲ್ಲಿ ಉಂಟಾಗುವ ಸಂಕಷ್ಟಗಳನ್ನು ಪರಿಹರಿಸಿಕೊಳ್ಳಬಹುದಾಗಿದೆ ಎಂದು ಅವರು ಹೇಳಿದರು.
ವಿದ್ಯಾರ್ಥಿಗಳು ವೈಯಕ್ತಿಕವಾಗಿ ಅಥವಾ ಶಾಲೆಗಳ ಮೂಲಕ ಡಿಜಿಟಲ್ ಪ್ಯಾನಲ್ ಬೋರ್ಡ್, ಟಿವಿ, ಲ್ಯಾಪ್‌ಟಾಪ್ ಅಥವಾ ಮೊಬೈಲ್ ಬಳಸಿ ಲಿಂಕ್ ಮೂಲಕ ಜಾಯಿನ್ ಆಗಿ ಸಂವಾದದಲ್ಲಿ ಭಾಗವಹಿಸಬಹುದು.
ಸಂವಾದದಲ್ಲಿ ಭಾಗವಹಿಸುವ ವಿಷಯವಾರು ಸಂಪನ್ಮೂಲ ವ್ಯಕ್ತಿಗಳು:
ಪರೀಕ್ಷೆ ಆರಂಭವಾಗುವವರೆಗೂ ತರಗತಿಗಳಲ್ಲಿ ಅಥವಾ ಸ್ವಂತವಾಗಿ ಬರಬಹುದಾದ ಯಾವುದೇ ಪ್ರಶ್ನೆಗಳನ್ನು ವಿದ್ಯಾರ್ಥಿಗಳು ಈ ಸಂವಾದದಲ್ಲಿ ಪ್ರಶ್ನಿಸಿ ಸ್ಪಷ್ಟೀಕರಣ ಪಡೆಯಬಹುದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ತಿಳಿಸಿದ್ದಾರೆ.