ಸುಗಟೂರು ಸರ್ಕಾರಿ ಶಾಲೆಯ ವಿದ್ಯಾರ್ಥಿನಿ ಮೊನಿಷಾ ರಾಷ್ಟ್ರಮಟ್ಟದ ಪ್ರತಿಭಾ ವಿದ್ಯಾರ್ಥಿವೇತನಕ್ಕೆ ಆಯ್ಕೆ

- Advertisement -
- Advertisement -

Sugaturu, Sidlaghatta : ನವದೆಹಲಿಯ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆಯೊಂದಿಗೆ ರಾಜ್ಯದ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ (DSERT) ಫೆಬ್ರವರಿಯಲ್ಲಿ ನಡೆಸಿದ ರಾಷ್ಟ್ರೀಯ ಮೆರಿಟ್ ಮೆನ್‌ಟೆನ್ಸ್ ವಿದ್ಯಾರ್ಥಿವೇತನ (NMMS) ಪರೀಕ್ಷೆಯಲ್ಲಿ ಶಿಡ್ಲಘಟ್ಟ ತಾಲ್ಲೂಕಿನ ಸುಗಟೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಎಸ್.ಎಸ್. ಮೊನಿಷಾ ಉತ್ತಮ ಅಂಕಗಳನ್ನು ಗಳಿಸಿ ವಿದ್ಯಾರ್ಥಿವೇತನಕ್ಕೆ ಆಯ್ಕೆಯಾಗಿದ್ದಾರೆ.

ಪ್ರತಿವರ್ಷ 8ನೇ ತರಗತಿಯ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಈ ಪರೀಕ್ಷೆ ಆಯೋಜಿಸಲಾಗುತ್ತಿದ್ದು, ಈ ಬಾರಿ ಕೂಡ ಸುಗಟೂರು ಶಾಲೆಯ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಮುಂದುವರೆಸಿದ್ದಾರೆ. ಮೊನಿಷಾ ಅವರ ಈ ಸಾಧನೆ ಆಕೆಯ ಮುಂದಿನ ವಿದ್ಯಾಭ್ಯಾಸಕ್ಕೆ ನಿಸ್ಸಂದೇಹವಾಗಿ ನೆರವಾಗಲಿದೆ ಎಂದು ಅವರ ಪೋಷಕರಾದ ಶಿವಕುಮಾರ್ ಮತ್ತು ಸಾವಿತ್ರಮ್ಮ ಸಂತಸ ವ್ಯಕ್ತಪಡಿಸಿದರು.

ವಿದ್ಯಾರ್ಥಿನಿಯ ಯಶಸ್ಸನ್ನು ಮೆಚ್ಚಿದ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎ. ನರೇಂದ್ರಕುಮಾರ್, ಕ್ಷೇತ್ರ ಸಮನ್ವಯಾಧಿಕಾರಿ ಕೆ.ಎಚ್. ಪ್ರಸನ್ನಕುಮಾರ್, ಸಿಆರ್‌ಪಿ ಎಂ. ರಮೇಶ್‌ಕುಮಾರ್, ಮುಖ್ಯಶಿಕ್ಷಕ ಎಚ್.ಎಸ್. ರುದ್ರೇಶಮೂರ್ತಿ ಹಾಗೂ ತಾಲ್ಲೂಕು ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಎಲ್.ವಿ. ವೆಂಕಟರೆಡ್ಡಿ ಅಭಿನಂದನೆ ಸಲ್ಲಿಸಿದ್ದಾರೆ.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!