
Sidlaghatta : ಸರಕಾರಿ ನೌಕರರ ರಾಷ್ಟ್ರ ಸಮಿತಿ ಹಾಗೂ ಯುವ ಕ್ರೀಡಾ ಮತ್ತು ಸಬಲೀಕರಣ ಇಲಾಖೆಯ ಸಹಯೋಗದಲ್ಲಿ ನಡೆಯಲಿರುವ ಅಖಿಲ ಭಾರತ ನಾಗರಿಕ ಸೇವಾ ಖೋ-ಖೋ ರಾಷ್ಟ್ರ ಮಟ್ಟದ ಪಂದ್ಯಾವಳಿಯಲ್ಲಿ ತಾಲ್ಲೂಕಿನ ಎಸ್.ಗುಂಡ್ಲಹಳ್ಳಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಸಿ.ಕೆ.ಗಂಗಾಧರ್ ಆಯ್ಕೆಯಾಗಿದ್ದಾರೆ.
ನವ ದೆಹಲಿಯ ವಿನಯ್ ಮಾರ್ಗ್ ಸ್ಪೋಟ್ಸ್ ಕಾಂಪ್ಲೆಕ್ಸ್‌ನಲ್ಲಿ ಮಾರ್ಚ್ 21 ರಿಂದ 24ರವರೆಗೆ ನಡೆಯುವ ನಾಲ್ಕು ದಿನಗಳ ಈ ಪಂದ್ಯಾವಳಿಯಲ್ಲಿ ಅವರು ಕರ್ನಾಟಕ ತಂಡವನ್ನು ಪ್ರತಿನಿಧಿಸಲಿದ್ದಾರೆ. ಇದರಿಂದ ಶಿಡ್ಲಘಟ್ಟ ತಾಲ್ಲೂಕಿನ ಕ್ರೀಡಾಭಿಮಾನಿಗಳಿಗೆ ಹೆಮ್ಮೆ ಮೂಡಿಸಿದೆ.
ರಾಷ್ಟ್ರೀಯ ಮಟ್ಟದ ಈ ಗೌರವ ಸಾಧಿಸಿರುವ ಗಂಗಾಧರ್ ಅವರನ್ನು ಶಾಸಕ ಬಿ.ಎನ್.ರವಿಕುಮಾರ್, ತಹಶೀಲ್ದಾರ್ ಬಿ.ಎನ್.ಸ್ವಾಮಿ, ಸರ್ಕಾರಿ ನೌಕರರ ಸಂಘದ ರಾಜ್ಯ ಕಾರ್ಯದರ್ಶಿ ಕೆ.ಎನ್.ಸುಬ್ಬಾರೆಡ್ಡಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷೆ ಸರಸ್ವತಮ್ಮ, ಬಿಇಒ ನರೇಂದ್ರ ಕುಮಾರ್, ಮುಖ್ಯಶಿಕ್ಷಕ ರಾಘವೇಂದ್ರ, ಸಿಆರ್‌ಪಿ ಆನಂದ್ ಅಭಿನಂದಿಸಿ, ರಾಷ್ಟ್ರ ಮಟ್ಟದಲ್ಲಿ ಯಶಸ್ಸು ಸಾಧಿಸಲಿ ಎಂದು ಹಾರೈಸಿದರು.