Sidlaghatta : ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಅವರನ್ನು ಸಜ್ಜುಗೊಳಿಸುವ ಮೂಲಕ ವಿಶ್ವಕರ್ಮ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸೋಣ ಎಂದು ತಹಶೀಲ್ದಾರ್ ಬಿ.ಎನ್.ಸ್ವಾಮಿ ತಿಳಿಸಿದರು.
ನಗರದ ತಾಲ್ಲೂಕು ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ “ವಿಶ್ವಕರ್ಮ ಜಯಂತಿಯ ಪೂರ್ವಭಾವಿ ಸಭೆ”ಯಲ್ಲಿ ಅವರು ಮಾತನಾಡಿದರು.
ಇತಿಹಾಸ ಹೊಂದಿರುವ ವಿಶ್ವಕರ್ಮ ಕೌಶಲ್ಯ ಮತ್ತು ಸಾಧನೆ ಮುಂದಿನ ಜನಾಂಗಕ್ಕೆ ತಿಳಿಯುವಂತಾಗಬೇಕು. ಶಾಸಕರೂ ಭಾಗಿಯಾಗುವ ಈ ಕಾರ್ಯಕ್ರಮದಲ್ಲಿ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಹೇಳಿದರು.
ವಿಶ್ವಕರ್ಮ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಅಮರನಾರಾಯಣಾಚಾರಿ ಮಾತನಾಡಿ, ನಾಡ ಹಬ್ಬಗಳ ಆಚರಣಾ ಸಮಿತಿಯಿಂದ ನಡೆಯುವ ಈ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಬೇಕು. ಎಲ್ಲಾ ಕಚೇರಿಗಳೂ ಮತ್ತು ಗ್ರಾಮ ಪಂಚಾಯಿತಿಗಳಲ್ಲಿ ವಿಶ್ವಕರ್ಮರ ಸಂದೇಶ ತಿಳಿಸಿ, ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಗೌರವಿಸುವಂತೆ ಸೂಚನೆ ನೀಡಬೇಕೆಂದು ತಹಶೀಲ್ದಾರ್ ಅವರನ್ನು ವಿನಂತಿಸಿದರು.
ತಾಲ್ಲೂಕು ಆರೋಗ್ಯಾಗ್ಯಾಧಿಕಾರಿ ಡಾ.ವೆಂಕಟೇಶ್ವರ ಮೂರ್ತಿ, ಕಾಳಿಕಾಂಬ ಕಮಠೇಶ್ವರ ದೇವಾಲಯ ಸಮಿತಿ ಅಧ್ಯಕ್ಷ ಮುನಿರತ್ನಮಾಚಾರಿ, ಕೃಷ್ಣಾಚಾರಿ, ಇ.ಸಿ.ಒ ಮಂಜುನಾಥ್, ಸುಂದರಾಚಾರಿ, ಗೌರೀಶ್, ಮುರಳಿ, ಶ್ರೀನಾಥ್ ಹಾಜರಿದ್ದರು.