Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಸುಗಟೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಸೋಮವಾರ ಸುಂದರಲಾಲ್ ಬಹುಗುಣ ಇಕೋಕ್ಲಬ್ ವತಿಯಿಂದ ಹಮ್ಮಿಕೊಂಡಿದ್ದ ಸಸಿ ನೆಡುವ ಕಾರ್ಯಕ್ರಮ, ವಿಶ್ವ ಕೈ ತೊಳೆಯುವ ದಿನಾಚರಣೆ, ಪ್ಲಾಸ್ಟಿಕ್ ವರ್ಜನೆ ಜಾಗೃತಿ ಕಾರ್ಯಕ್ರಮದಲ್ಲಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಎಂಜಿನಿಯರ್ ಎನ್.ದಿನೇಶ್ ಮಾತನಾಡಿದರು.
ಪರಿಸರ ಸಂರಕ್ಷಣೆಯನ್ನು ಎಲ್ಲರೂ ತಮ್ಮ ಹೊಣೆಗಾರಿಕೆ ಎಂದು ಭಾವಿಸಿ ಸಸಿಗಳನ್ನು ನೆಟ್ಟು ಪೋಷಿಸಬೇಕು. ಪರಿಸರವನ್ನು ಸ್ವಚ್ಚವಾಗಿರಿಸಿಕೊಳ್ಳಬೇಕು. ಸುತ್ತಮುತ್ತಲೂ ನೈರ್ಮಲ್ಯ ಕಾಪಾಡಲು ಮುಂದಾಗಬೇಕು. ಆಧುನಿಕ ವ್ಯಾಮೋಹದಿಂದ ಸ್ವಾರ್ಥಕ್ಕಾಗಿ ಪರಿಸರ ನಾಶ ಮಾಡುವುದೇ ಹೆಚ್ಚಾಗಿದೆ. ಪ್ಲಾಸ್ಟಿಕ್ ಮುಕ್ತವಾಗಿಸಲು ಯುವಪೀಳಿಗೆ ಪಣತೊಡಬೇಕು ಎಂದು ಅವರು ತಿಳಿಸಿದರು.
ಸಸ್ಯಗಳು ಅಂತರ್ಜಲ ಹೆಚ್ಚಿಸುವ ಎಟಿಎಂಗಳಿದ್ದಂತೆ. ನೀರನ್ನು ಇಂಗಿಸಿ ಅಂತರ್ಜಲಮಟ್ಟವನ್ನು ಕಾಯ್ದಿರಿಸಿಕೊಳ್ಳಬಲ್ಲವು. ಪರಿಸರದ ಘಟಕಗಳಾದ ನೀರು, ಮಣ್ಣು, ಗಾಳಿಯನ್ನು ಮುಂದಿನ ಪೀಳಿಗೆಗೆ ಯಥಾವತ್ತಾಗಿ ಉಳಿಸುವ ಜವಾಬ್ದಾರಿಯು ನಮ್ಮೆಲ್ಲರ ಮೇಲಿದೆ ಎಂದರು.
ಶಿಕ್ಷಕ ಎಚ್.ಎಸ್.ರುದ್ರೇಶಮೂರ್ತಿ ಮಾತನಾಡಿ, ಪೂರ್ವಜರಿಗೆ ತಾಂತ್ರಿಕತೆಯ ಅರಿವಿಲ್ಲದಿದ್ದರೂ ಪರಿಸರಸಂಸರಕ್ಷಣೆಯ ಜ್ಞಾನಹೊಂದಿದ್ದರು. ಬುದ್ದಿವಂತರಾದಂತೆಲ್ಲಾ ಪರಿಸರದ ಮೇಲಿನ ದಬ್ಬಾಳಿಕೆ ಹೆಚ್ಚುವಂತಾಗಿದೆ. ಪರಿಸರವನ್ನು ದೇವರ ರೂಪದಲ್ಲಿ ನೋಡುತ್ತಿದ್ದ ಹಿರಿಯರ ಗುಣವು ಅನುಕರಣೀಯವಾದುದು. ಆಹಾರಸೇವನೆಯಲ್ಲಿ ಶುಚಿತ್ವ, ಶುಭ್ರತೆ, ಪೌಷ್ಟಿಕತೆ ಮಹತ್ವದ ಸ್ಥಾನವಿದೆ ಎಂದರು.
ಗ್ರಾಮಪಂಚಾಯಿತಿ ಅಧ್ಯಕ್ಷೆ ಶಾಂತಮ್ಮ ದೇವರಾಜು ಮಾತನಾಡಿ, ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಬೇಕು. ಪರ್ಯಾಯವಾಗಿ ಬಟ್ಟೆ, ಕಾಗದ, ಅಡಿಕೆಪಟ್ಟೆಯಂತಹ ಕೊಳೆಯುವ ವಸ್ತುಗಳಿಂದ ಮಾಡಿದ ವಸ್ತುಗಳನ್ನು ಬಳಸಲು ಮುಂದಾಗಬೇಕು. ಪರಿಸರದ ಕಾಳಜಿ ಪ್ರತಿ ಮನೆಯಿಂದಲೂ ಆರಂಭವಾಗಬೇಕು ಎಂದರು.
ಕೈತೊಳೆಯುವ ವಿಧಾನ ಮತ್ತು ಹಂತಗಳ ಕುರಿತು ಪ್ರಾತ್ಯಕ್ಷಿಕೆ ಪ್ರದರ್ಶಿಸಲಾಯಿತು. ಶಾಲಾ ಆವರಣದಲ್ಲಿ ನೂರಕ್ಕೂ ಹೆಚ್ಚು ಸಸಿಗಳನ್ನು ನೆಡಲಾಯಿತು.
ಎಸ್‌ಡಿಎಂಸಿ ಅಧ್ಯಕ್ಷ ಜಗದೀಶ್, ಗ್ರಾಮಪಂಚಾಯಿತಿ ಸದಸ್ಯ ಎ.ಸತೀಶ್‌ಕುಮಾರ್, ಶಿವಶಂಕರಪ್ಪ, ಎಂ.ನಾಗರಾಜು, ಮಾಜಿ ಸದಸ್ಯ ಎನ್.ಅಶ್ವತ್ಥಪ್ಪ, ದೇವರಾಜು, ಎಸ್‌ಡಿಎಂಸಿ ಸದಸ್ಯೆ ರತ್ನಮ್ಮ, ನಂದಿನಿ, ಗ್ರಾಮಸ್ಥರಾದ ದೊಡ್ಡಮುನಿವೆಂಕಟಶೆಟ್ಟಿ, ಜಯರಾಮಪ್ಪ, ಚಿಕ್ಕಮುನಿವೆಂಕಟಶೆಟ್ಟಿ, ಬಚ್ಚೇಗೌಡ, ಶ್ರೀನಿವಾಸ್, ಪುರುಷೋತ್ತಮ್, ಸುಬ್ರಮಣಿ ಹಾಜರಿದ್ದರು.
For Daily Updates WhatsApp ‘HI’ to 7406303366
Follow Chikkaballapur District News
Facebook: https://www.facebook.com/hicbpur
Twitter: https://twitter.com/hicbpur