Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಭಕ್ತರಹಳ್ಳಿಯ (Bhaktarahalli) ಭಾರತರತ್ನ ಸರ್.ಎಂ.ವಿಶ್ವೇಶ್ವರಯ್ಯ (BMV) ವಿದ್ಯಾಸಂಸ್ಥೆಯಲ್ಲಿ ಗುರುವಾರ ಸರ್.ಎಂ.ವಿಶ್ವೇಶ್ವರಯ್ಯ (Sir M. Visvesvaraya) ಅವರ 162 ನೇ ಜನ್ಮದಿನಾಚರಣೆ (Birth Anniversary) ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಮಾತನಾಡಿದ ಬಿ.ಎಂ.ವಿ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಎಲ್.ಕಾಳಪ್ಪ ಅವರು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಸಹಕಾರ ಮತ್ತು ಆರ್ಥಿಕ ಬೆಂಬಲದೊಂದಿಗೆ ಸರ್.ಎಂ.ವಿಶ್ವೇಶ್ವರಯ್ಯನವರು ಈ ರಾಜ್ಯದಲ್ಲಿ ಮಾಡಿದ ದೂರದರ್ಶಿ ಯೋಜನೆಗಳು ಅಭೂತಪೂರ್ವವಾದವು, ಉನ್ನತ ವ್ಯಾಸಂಗಕ್ಕೆ ಹೋದಂತೆಲ್ಲಾ ವಿದ್ಯಾರ್ಥಿಗಳು ವಿಶ್ವೇಶ್ವರಯ್ಯನವರ ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕು ಎಂದು ತಿಳಿಸಿದರು.
ಶಿಡ್ಲಘಟ್ಟ ತಾಲ್ಲೂಕಿನ ಅಪ್ಪೇಗೌಡನಹಳ್ಳಿಯ ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಕಸಾಪ (Kannada Sahitya Parishat) ವತಿಯಿಂದ ಆಯೋಜಿಸಿದ್ದ ಭಾರತರತ್ನ ಸರ್.ಎಂ.ವಿಶ್ವೇಶ್ವರಯ್ಯ ನವರ 162 ನೇ ಜನ್ಮ ದಿನ ಮತ್ತು ಎಂಜಿನಿಯರ್ ದಿನದ ಕಾರ್ಯಕ್ರಮದಲ್ಲಿ ಬೆಸ್ಕಾಂ ಎಂಜಿನಿಯರ್ ವೈ.ಎಸ್.ವೆಂಕಟೇಶಪ್ಪ ಅವರನ್ನು ಗೌರವಿಸಲಾಯಿತು.

For Daily Updates WhatsApp ‘HI’ to 7406303366
Follow Chikkaballapur District News
Facebook: https://www.facebook.com/hicbpur
Twitter: https://twitter.com/hicbpur