Chikkaballapur : ಗುರುವಾರ ಚಿಕ್ಕಬಳ್ಳಾಪುರ ನಗರದ ಎಸ್‌ಜೆಸಿ ತಾಂತ್ರಿಕ ವಿದ್ಯಾಲಯದ ( SJCIT ) ಪ್ರಥಮ ವರ್ಷದ ಎಂಜಿನಿಯರಿಂಗ್ ತರಗತಿಗಳ ಆರಂಭ ಕಾರ್ಯಕ್ರಮವನ್ನು ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ” ಇಂದಿನ ತಂತ್ರಜ್ಞಾನ ಮತ್ತು ಜಾಗತೀಕ ಯುಗದಲ್ಲಿ ಕೌಶಲಗಳು ಅವಶ್ಯ ಇದರಿಂದ ಹೆಚ್ಚು ಉದ್ಯೋಗಾವಕಾಶಗಳು ದೊರೆಯಲಿದ್ದು ಕೌಶಲಗಳನ್ನು ವಿದ್ಯಾರ್ಥಿಗಳು ಕರಗತ ಮಾಡಿಕೊಳ್ಳಬೇಕು. ಪ್ರಥಮ ವರ್ಷದ ಎಂಜಿನಿಯರಿಂಗ್ ತರಗತಿಗಳ ಆರಂಭವಾಗುತ್ತಿರುವುದು ಸಂತಸ ತಂದಿದ್ದು, ಕಲಿಕೆಯ ಕಡೆ ವಿದ್ಯಾರ್ಥಿಗಳು ಗಮನಹರಿಸಬೇಕು” ಎಂದು ತಿಳಿಸಿದರು.
ಸ್ವಾಮಿ ಪರಮಾತ್ಮಾನಂದ ಸರಸ್ವತಿ, ಮಂಗಳಾನಂದನಾಥ ಸ್ವಾಮೀಜಿ, ಬೆಂಗಳೂರು ವಿವಿ ಕುಲಪತಿ ಡಾ.ವೇಣುಗೋಪಾಲ್, ಎನ್.ಶಿವರಾಮ ರೆಡ್ಡಿ ಇತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
For Daily Updates WhatsApp ‘HI’ to 7406303366
Follow Chikkaballapur District News
Facebook: https://www.facebook.com/hicbpur
Twitter: https://twitter.com/hicbpur