Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಬೋದಗೂರು ಗ್ರಾಮದಲ್ಲಿ ಬುಧವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ, ಬೋದಗೂರು ಕೆರೆ ಅಭಿವೃದ್ಧಿ ಸಮಿತಿ, ಆನೂರು ಗ್ರಾಮ ಪಂಚಾಯಿತಿ ಜಂಟಿ ಆಶ್ರಯದಲ್ಲಿ ನಮ್ಮೂರು ನಮ್ಮ ಕೆರೆ ಯೋಜನೆ ಅಡಿಯಲ್ಲಿ ಹೂಳೆತ್ತಲಾದ ಬೋದಗೂರು ಕೆರೆಗೆ ಬಾಗಿನ ಅರ್ಪಣೆ ಹಾಗೂ ಕೆರೆ ಹಸ್ತಾಂತರ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಂಗಳೂರು ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕ ಎಂ.ಶೀನಪ್ಪ ಅವರು ಮಾತನಾಡಿದರು.
ಇದುವರೆಗೆ ಸುಮಾರು 36 ಕೋಟಿಯಷ್ಟು ಮೊತ್ತವನ್ನು ಕೆರೆ ಹೂಳೆತ್ತುವ ಕಾರ್ಯಕ್ಕೆ ರಾಜ್ಯದಲ್ಲಿ ವಿನಿಯೋಗಿಸಲಾಗಿದೆ. ಪರಮ ಪೂಜ್ಯರು ಮಾತೃಶ್ರೀ ಅಮ್ಮನವರ ಆಶಯದಂತೆ ಕೆರೆ ಹೂಳೆತ್ತುವ ಪುಣ್ಯದ ಕೆಲಸ ಮಾಡಲಾಗುತ್ತಿದೆ. ಗ್ರಾಮಾಭಿವೃದ್ದಿ ಯೋಜನೆಯಿಂದ ಸ್ವಸಹಾಯ ಸಂಘಗಳ ಚಳುವಳಿಯ ಮೂಲಕ ಪ್ರತಿಯೊಂದು ಮಹಿಳೆಯೂ ಆರ್ಥಿಕ ಚಟುವಟಿಕೆ ನಡೆಸುತ್ತಾ ಆರ್ಥಿಕ ಸಬಲರಾಗುತ್ತಿದ್ದಾರೆ. ಎಂದು ಅವರು ತಿಳಿಸಿದರು.
ಕೋಚಿಮುಲ್ ನಿರ್ದೇಶಕ ಆರ್. ಶ್ರೀನಿವಾಸ್ ಮಾತನಾಡಿ, ಯಾವುದೇ ಪ್ರತಿಫಲ ಅಪೇಕ್ಷೆ ಇಲ್ಲದೆ ಇಂತಹ ಸಮಾಜಮುಖಿ ಕೆಲಸವನ್ನು ಧರ್ಮಸ್ಥಳ ಸಂಘದವರು ಮಾಡುತ್ತಿದ್ದಾರೆ. ನಾಡಿನ ಜಲ ಮೂಲಗಳನ್ನು ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ರೈತರು ರಾಸಾಯನಿಕ ಬಳಕೆ ಕಡಿಮೆ ಮಾಡಿ ಸಾವಯವ ಕೃಷಿಗೆ ಒತ್ತು ನೀಡುವಂತಾಗಲಿ ಎಂದು ಹೇಳಿದರು.
ತಹಶೀಲ್ದಾರ್ ಬಿ.ಎಸ್.ರಾಜೀವ್, ಕೆರೆ ಸಮಿತಿ ಅಧ್ಯಕ್ಷ ವೆಂಕಟಸ್ವಾಮಿ ರೆಡ್ಡಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕಾತ್ಯಾಯಿನಿ, ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಜಿಲ್ಲಾ ನಿರ್ದೇಶಕ ಪ್ರಶಾಂತ್, ಗ್ರಾಮ ಪಂಚಾಯಿತಿ ಸದಸ್ಯರಾದ ಬೆಳ್ಳೂಟಿ ಸಂತೋಷ. ಅರುಣ ಸುರೇಶ್, ವಿಶ್ವಾಸ್, ಎಪಿಎಂಸಿ ನಿರ್ದೇಶಕ ವೆಂಕಟೇಶ್, ಸುರೇಶ್, ಹಿತ್ತಲಹಳ್ಳಿ ಗೋಪಾಲಗೌಡ, ಯೋಜನಾಧಿಕಾರಿ ಪ್ರಕಾಶ್ ಕುಮಾರ್, ವಲಯ ಮೇಲ್ವಿಚಾರಕ ನವೀನ್ ಹಾಜರಿದ್ದರು.