Chikkaballapur : ಚಿಕ್ಕಬಳ್ಳಾಪುರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಘನತ್ಯಾಜ್ಯ ನಿರ್ವಹಣೆ ಯೋಜನೆಯ (Solid Waste Management) ಅನುಭವ ಹಂಚಿಕೆ ಕಾರ್ಯಕ್ರಮದಲ್ಲಿ ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ “ಚಿಕ್ಕಬಳ್ಳಾಪುರ ನಗರಸಭೆ, Indian Institute for Human Settlements (ಐಐಎಚ್‌ಎಸ್) ಮತ್ತು ಗೋದ್ರೇಜ್ ಪ್ರಾಪರ್ಟಿಸ್ ಲಿಮಿಟೆಡ್, ರೈತರ ಸಹಭಾಗಿತ್ವದಲ್ಲಿ ಈ ಘನತ್ಯಾಜ್ಯ ನಿರ್ವಹಣೆ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದ್ದು, ಈ ಯೋಜನೆಯಡಿ ಹಸಿ ಕಸವನ್ನು ಗೊಬ್ಬರವನ್ನಾಗಿ ಪರಿವರ್ತಿಸಲಾಗುತ್ತಿದೆ. 2024ರ ಮಾರ್ಚ್‌ನಲ್ಲಿ ಈ ಯೋಜನೆ ಆರಂಭವಾಗಿದ್ದು ಈಗಾಗಲೇ 230 ರೈತರು ಕಳೆದ ಆರು ತಿಂಗಳಿನಲ್ಲಿ ಸುಮಾರು 1,800 ಟನ್ ಕಸವನ್ನು ಗೊಬ್ಬರವಾಗಿ ಪರಿವರ್ತಿಸಿದ್ದಾರೆ” ಎಂದು ತಿಳಿಸಿದರು.
ನಗರಸಭೆ ಅಧ್ಯಕ್ಷ ಗಜೇಂದ್ರ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಮಾಧವಿ ಕೆ, ನಗರಸಭೆಯ ಸಹಾಯಕ ಕಾರ್ಯ ಪಾಲಕ ಎಂಜಿನಿಯರ್ ಉಮಾಶಂಕರ್ ಪಿ, ಗೋದ್ರೇಜ್ ಸಂಸ್ಥೆಯ ಮೋಹಿತ್ ಡೋಲಸ್, ಐಐಎಚ್‌ಎಸ್ ಸಂಸ್ಥೆಯ ಮನೀಶ್ ದುಬೆ, ಗೋಪಾಲ್ ಜೈನ, ಪುಷ್ಕರ ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.