Chikkaballapur : ಚಿಕ್ಕಬಳ್ಳಾಪುರ ಜಿಲ್ಲೆಯೂ ಸೇರಿದಂತೆ ಐದು ಜಿಲ್ಲೆಗಳನ್ನು ಒಳಗೊಂಡ ವಿಧಾನ ಪರಿಷತ್‌ನ (Vidhana Parishat) ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ (South East Teachers Constituency Election) ಸೋಮವಾರ ಬೆಳಿಗ್ಗೆ 8 ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದ್ದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಒಟ್ಟು 3,510 ಮತದಾರರು ಹಕ್ಕು ಚಲಾಯಿಸಲು ಅರ್ಹರಿದ್ದಾರೆ.
ಕಾಂಗ್ರೆಸ್‌ನಿಂದ ಡಿ.ಟಿ.ಶ್ರೀನಿವಾಸ್, ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ವೈ.ಎ.ನಾರಾಯಣಸ್ವಾಮಿ, ಅನುದಾನ ರಹಿತ ಖಾಸಗಿ ಶಾಲೆಗಳ ಆಡಳಿತ ಮಂಡಳಿ (ರುಪ್ಸಾ) ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ , ಕರ್ನಾಟಕ ರಾಷ್ಟ್ರ ಸಮಿತಿಯಿಂದ ಕಿಶನ್ ಎಂ.ಜಿ, ಪಕ್ಷೇತರರಾಗಿ ಜಿ.ಎಚ್.ಇಮ್ರಾಪುರ್, ಕಪನಿಗೌಡ, ಎನ್.ಇ.ನಟರಾಜ್, ವೈ.ಆರ್.ನಾರಾಯಣಸ್ವಾಮಿ, ಬಾಬು ಯೋಗೀಶ್ ಆರ್, ವನಿತಾ ಎಸ್., ವಿನೋದ್ ಶಿವರಾಜ್, ಶ್ರೀನಿವಾಸ್ ಬಿ., ಸೈಯ್ಯದ್ ಅಫ್ಕ್ ಅಹಮದ್ ಕಣದಲ್ಲಿ ಇದ್ದಾರೆ.
ಜಿಲ್ಲೆಯಲ್ಲಿ ಗೌರಿಬಿದನೂರು, ಮಂಚೇನಹಳ್ಳಿ, ಬಾಗೇಪಲ್ಲಿ, ಚೇಳೂರು, ಗುಡಿಬಂಡೆ, ಚಿಕ್ಕಬಳ್ಳಾಪುರ, ಶಿಡ್ಲಘಟ್ಟ, ಚಿಂತಾಮಣಿ ತಾಲ್ಲೂಕು ಕಚೇರಿಗಳಲ್ಲಿ ಮತಗಟ್ಟೆ ಸ್ಥಾಪಿಸಲಾಗಿದ್ದು 750ಕ್ಕೂ ಹೆಚ್ಚು ಮತದಾರರು ಇರುವ ಕಾರಣ ಚಿಕ್ಕಬಳ್ಳಾಪುರ ಮತ್ತು ಚಿಂತಾಮಣಿ ತಾಲ್ಲೂಕುಗಳಲ್ಲಿ ಆಕ್ಸಿಲರಿ ಮತಗಟ್ಟೆ ಸ್ಥಾಪಿಸಲಾಗಿದೆ. ಜೂನ್ 6 ರಂದು ಮತಗಳ ಎಣಿಕೆ ಕಾರ್ಯವು ನಡೆಯಲಿದೆ.