19.6 C
Bengaluru
Tuesday, March 3, 2026

Kaiwara ದಲ್ಲಿ ಹುಣ್ಣಿಮೆ ರಥೋತ್ಸವ

- Advertisement -
- Advertisement -

Chintamani : ಕೈವಾರದ ಯೋಗಿ ನಾರೇಯಣ ಮಠದಲ್ಲಿ (Sri Kaiwara Yogi Nareyana Mutt) ಮಂಗಳವಾರ ಹುಣ್ಣಿಮೆ ವಿಶೇಷ ಪೂಜೆಗಳನ್ನು ಹಮ್ಮಿಕೊಳ್ಳಲಾಗಿದ್ದು ತಾತ್ತಯ್ಯನವರ ಗರ್ಭಗುಡಿಯಲ್ಲಿ ವಿಶೇಷ ಅಲಂಕಾರ ಮಾಡಲಾಗಿತ್ತು.

ಹುಣ್ಣಿಮೆ ವಿಶೇಷ ಕೈಂಕರ್ಯದಲ್ಲಿ ಶ್ರೀದೇವಿ, ಭೂದೇವಿ ಸಮೇತ ಅಮರನಾರೇಯಣ ಸ್ವಾಮಿ ಹಾಗೂ ಸದ್ಗುರು ತಾತಯ್ಯನವರ ಉತ್ಸವ ಮೂರ್ತಿಗೆ ವಿಶೇಷ ಅಭಿಷೇಕ, ಮತ್ತು ಅಷ್ಟಾವಧಾನ ಸೇವೆಯನ್ನು ನೇರವೇರಿಸಿ ಮಹಾಮಂಗಳಾರತಿ ಮಾಡಲಾಯಿತು.

ಶಾಸ್ತ್ರೋಕ್ತವಾಗಿ ಮಂಗಳವಾದ್ಯಗಳೊಂದಿಗೆ ಉತ್ಸವ ಮೂರ್ತಿಗಳನ್ನು ಕರೆತಂದು ರಥದಲ್ಲಿ ಕುಳ್ಳರಿಸಿ ಅಲಂಕರಿಸಿ ಅರ್ಚಕರು ರಥದಲ್ಲಿ ಮತ್ತೊಮ್ಮೆ ಪೂಜೆ ಸಲ್ಲಿಸಿ, ರಥೋತ್ಸವ ನಡೆಸಲಾಯಿತು. ಹುಣ್ಣಿಮೆ ಪ್ರಯುಕ್ತ ನಾದಸುಧಾರಸ ವೇದಿಕೆಯಲ್ಲಿ ಅಖಂಡ ಸಂಕೀರ್ತನೆ ಏರ್ಪಡಿಸಲಾಗಿತ್ತು. ಭಕ್ತಾದಿಗಳು ಅಧಿಕ ಸಂಖ್ಯೆಯಲ್ಲಿ ಪೂಜಾ ಕೈಂಕರ್ಯಗಳಲ್ಲಿ ಭಾಗವಹಿಸಿದ್ದರು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!