29.8 C
Bengaluru
Saturday, February 28, 2026

ಶ್ರೀ ಪಾರ್ವತಾಂಭ ಸಮೇತ ಶ್ರೀ ಸೋಮೇಶ್ವರಸ್ವಾಮಿಯ ಬ್ರಹ್ಮರಥೋತ್ಸವ

- Advertisement -
- Advertisement -

Gudihalli, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಗುಡಿಹಳ್ಳಿಯ ಶ್ರೀ ಪಾರ್ವತಾಂಭ ಸಮೇತ ಶ್ರೀಸೋಮೇಶ್ವರಸ್ವಾಮಿ ದೇವಾಲಯದ ಬ್ರಹ್ಮರಥೋತ್ಸವವನ್ನು ಶನಿವಾರ ಶ್ರದ್ಧಾ ಭಕ್ತಿಯಿಂದ ನೆರವೇರಿಸಲಾಯಿತು. ಸುತ್ತ ಮುತ್ತಲ ಗ್ರಾಮಗಳಿಂದ ಆಗಮಿಸಿದ್ದ ಸಾವಿರಾರು ಭಕ್ತರು ಬ್ರಹ್ಮರಥೋತ್ಸವಕ್ಕೆ ಸಾಕ್ಷಿಯಾದರು.

ತಾಲ್ಲೂಕಿನ ಅಬ್ಲೂಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಡಿಹಳ್ಳಿ ಗ್ರಾಮದ ಶ್ರೀ ಪಾರ್ವತಾಂಭ ಸಮೇತ ಶ್ರೀ ಸೋಮೇಶ್ವರಸ್ವಾಮಿ ದೇವಾಲಯದ 16 ನೇ ವರ್ಷದ ಬ್ರಹ್ಮ ರಥೋತ್ಸವದ ಅಂಗವಾಗಿ ದೇವರಿಗೆ ವಿಶೇಷ ಹೂವಿನ ಅಲಂಕಾರ ಮಾಡಿ ಸಿಂಗರಿಸಿ ವಿಶೇಷ ಪೂಜೆ, ಹೋಮ, ಹವನ, ಕಳಶ ಪೂಜೆ, ಗಣಪತಿ ಪೂಜೆ ನಡೆಸಿ ಮಹಾ ಮಂಗಳಾರತಿ ನೆರವೇರಿಸಿ ತೀರ್ಥ ಪ್ರಸಾದವನ್ನು ವಿನಿಯೋಗಿಸಲಾಯಿತು.

ನಗರ ಹಾಗೂ ಸುತ್ತಮುತ್ತಲಿನ ಸಾವಿರಾರು ಗ್ರಾಮಸ್ಥರು ರಥೋತ್ಸವದಲ್ಲಿ ಭಾಗಿಯಾಗಿದ್ದರು. ಗುಡಿಹಳ್ಳಿ ಮತ್ತು ಸುತ್ತಲಿನ ಗ್ರಾಮಗಳ ಹೆಣ್ಣುಮಕ್ಕಳು ದೀಪಗಳನ್ನು ಹೊತ್ತು ಮೆರವಣಿಗೆ ನಡೆಸಿ ದೇವರಿಗೆ ಆರತಿ ಎತ್ತಿದರು. ವೀರಗಾಸೆ ಕಲಾತಂಡ ಮೆರವಣಿಗೆಗೆ ಮೆರುಗನ್ನು ತಂದಿತ್ತು.

ತಹಶೀಲ್ದಾರ್ ಬಿ.ಎನ್.ಸ್ವಾಮಿ, ಕಾಂಗ್ರೆಸ್ ಮುಖಂಡ ರಾಜೀವ್ ಗೌಡ, ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಬೈರೇಗೌಡ, ತಾಲ್ಲೂಕು ಅಧ್ಯಕ್ಷ ತಾದೂರು ಮಂಜುನಾಥ್, ಬಂಕ್ ಮುನಿಯಪ್ಪ, ಗುಡಿಯಪ್ಪ, ಚನ್ನಕೃಷ್ಣಪ್ಪ, ರವಿಕುಮಾರ್, ಶ್ರೀ ಪಾರ್ವತಾಂಭ ಶ್ರೀ ಸೋಮೇಶ್ವರಸ್ವಾಮಿ ಸೇವಾ ಸಮಿತಿ ಅಧ್ಯಕ್ಷ ಹರಿಕೃಷ್ಣ, ಕಾರ್ಯದರ್ಶಿ ಜಿ.ಎನ್.ನರಸಿಂಹಮೂರ್ತಿ, ಜಿ.ವಿ. ವೆಂಕಟಸ್ವಾಮಪ್ಪ, ಸದಸ್ಯರು, ಅರ್ಚಕರಾದ ಎಸ್.ನಂಜುಂಡಯ್ಯ, ಎನ್.ನಾಗೇಂದ್ರ, ಆಗಮೀಕ ಆರ್.ಗಣೇಶ್ ದೀಕ್ಷಿತ್ ಹಾಜರಿದ್ದರು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!