
Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಹಂಡಿಗನಾಳ ಗ್ರಾಮದ ಶ್ರೀ ವಿರಣ್ಣ ಕೆಂಪಣ್ಣ ಸ್ವಾಮಿ ಕಲ್ಯಾಣ ಮಂಟಪದಲ್ಲಿ ಶ್ರೀ ಶಾರದಾ ಬಾಲಕಿಯರ ಪ್ರೌಢಶಾಲೆ (Sri Sharada Girls High School) ವತಿಯಿಂದ 36 ವರ್ಷ ಸೇವೆ ಸಲ್ಲಿಸಿ ವಯೋನಿವೃತ್ತಿ (Retirement) ಹೊಂದಿರುವ ಕನ್ನಡ ಶಿಕ್ಷಕ ಎಂ.ಕೆಂಪಣ್ಣ (Kannada Teacher M Kempanna) ಅವರಿಗೆ ಅಭಿನಂದನೆ (Felicitation) ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಾಜಿ ಶಾಸಕ ಎಂ.ರಾಜಣ್ಣ ಮಾತನಾಡಿ, ಕೆಂಪಣ್ಣ ಅವರು ಶಿಕ್ಷಣ ಕ್ಷೇತ್ರ ಮಾತ್ರವಲ್ಲದೆ ಸಾಹಿತ್ಯ, ನಾಟಕ ಮತ್ತು ಇತರ ಎಲ್ಲಾ ಕ್ಷೇತ್ರದಲ್ಲೂ ತಮ್ಮ ಸೇವೆಯನ್ನು ಸಲ್ಲಿಸಿದ್ದಾರೆ. ವಿಶೇಷವಾಗಿ ಶಿಕ್ಷಕರಿಗೆ ಯಾವುದೇ ರೀತಿಯ ನಿವೃತ್ತಿ ಎಂಬುದು ಇರುವುದಿಲ್ಲ ಮುಂದಿನ ದಿನಗಳಲ್ಲಿ ಅವರ ನಿವೃತ್ತಿ ಜೀವನ ಉತ್ತಮವಾಗಿರಲಿ ಎಂದು ಹಾರೈಸುತ್ತೇನೆ ಎಂದರು.
ಶಾರದಾ ವಿದ್ಯಾಸಂಸ್ಥೆಯ ಮುನಿರತ್ನಂ, ಶ್ರೀಕಾಂತ್, ಕ್ಷೇತ್ರ ಶಿಕ್ಷಣಾಧಿಕಾರಿ ರಘುನಾಥರೆಡ್ಡಿ, ಕನ್ನಡ ಸಾಹಿತ್ಯ ಪರಿಷತ್ ನ ಜಿಲ್ಲಾಧ್ಯಕ್ಷ ಕೋಡಿರಂಗಪ್ಪ ಹಾಜರಿದ್ದರು.