Chikkaballapur : ಚಿಕ್ಕಬಳ್ಳಾಪುರ ಜಿಲ್ಲೆಯ 53 ಕೇಂದ್ರಗಳಲ್ಲಿ ಶುಕ್ರವಾರ SSLC ಪರೀಕ್ಷೆಯ ಪ್ರಥಮ ಭಾಷೆ ಕನ್ನಡ ಪರೀಕ್ಷೆ ಸುಗಮವಾಗಿ ನಡೆಯಿತು. ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ 15,736 ವಿದ್ಯಾರ್ಥಿಗಳ ಪೈಕಿ 15,457 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 279 ಮಂದಿ ಗೈರಾಗಿದ್ದರು (absentees).
ಬಾಗೇಪಲ್ಲಿ ತಾಲ್ಲೂಕಿನಲ್ಲಿ 2,426 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 2,353 ಮಂದಿ ಪರೀಕ್ಷೆಗೆ ಹಾಜರಾಗಿ 73 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಚಿಕ್ಕಬಳ್ಳಾಪುರದಲ್ಲೂ 2,807 ವಿದ್ಯಾರ್ಥಿಗಳು ನೋಂದಣಿಯಾಗಿದ್ದು, 2,761 ಮಂದಿ ಪರೀಕ್ಷೆಗೆ ಹಾಜರಾಗಿ 46 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಚಿಂತಾಮಣಿ ತಾಲ್ಲೂಕಿನಲ್ಲಿ 3,564 ವಿದ್ಯಾರ್ಥಿಗಳು ನೋಂದಣಿಯಾಗಿದ್ದು, 3,516 ಮಂದಿ ಪರೀಕ್ಷೆಗೆ ಹಾಜರಾಗಿ 48 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಗೌರಿಬಿದನೂರು ತಾಲ್ಲೂಕಿನಲ್ಲಿ 3,600 ವಿದ್ಯಾರ್ಥಿಗಳ ಪೈಕಿ 3,563 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 64 ಮಂದಿ ಗೈರಾಗಿದ್ದಾರೆ. ಗುಡಿಬಂಡೆ ತಾಲ್ಲೂಕಿನಲ್ಲಿ 705 ವಿದ್ಯಾರ್ಥಿಗಳು ನೋಂದಣಿಯಾಗಿದ್ದು, 689 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 16 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಶಿಡ್ಲಘಟ್ಟ ತಾಲ್ಲೂಕಿನಲ್ಲಿ 2,634 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, 2,602 ವಿದ್ಯಾರ್ಥಿಗಳು ಹಾಜರಾಗಿ 32 ವಿದ್ಯಾರ್ಥಿಗಳು ಗೈರಾಗಿದ್ದಾರೆ.
ಜಿಲ್ಲೆಯಲ್ಲಿ ವಿವಿಧ ಪರೀಕ್ಷಾ ಕೇಂದ್ರಗಳನ್ನು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.