Chikkaballapur : ಹಿಂದಿನ ವರ್ಷಗಳಲ್ಲಿ SSLC ಪರೀಕ್ಷೆಯಲ್ಲಿ ಶೇ 100ರಷ್ಟು ಫಲಿತಾಂಶಗಳಿಸಿದ (Result) ಶಾಲೆಗಳ ಮುಖ್ಯಸ್ಥರಿಗೆ (School administration) ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದದಲ್ಲಿ ಸನ್ಮಾನ (Honor) ಕಾರ್ಯಕ್ರಮ ಹಮ್ಮಿಕೊಳ್ಳಾಲಾಗಿತ್ತು. ಕಾರ್ಯಕ್ರಮದಲ್ಲಿ ಶೇ 100ರಷ್ಟು ಫಲಿತಾಂಶ ಪಡೆದ 175 ಶಾಲೆಗಳ ಮುಖ್ಯಸ್ಥರಿಗೆ ₹ 25 ಸಾವಿರ ಬಹುಮಾನ ಹಾಗೂ ಪಾರಿತೋಷಕ ನೀಡಲಾಯಿತು.
ಕಾರ್ಯಕ್ರಮದಳ್ಳಿ ಮಾತನಾಡಿದ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ “ಈಗಾಗಲೇ 2019-20 ಮತ್ತು 2020-21 ನೇ ಸಾಲಿನಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯು ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶದಲ್ಲಿ ರಾಜ್ಯ ಮಟ್ಟದಲ್ಲಿ ಮೊದಲ ಸ್ಥಾನ ಪಡೆದಿದ್ದು ಈ ಬಾರಿಯು ಪ್ರಥಮ ಸ್ಥಾನಗಳಿಸಬೇಕು. ಮುಖ್ಯವಾಗಿ ಸಂಖ್ಯಾತ್ಮಕ ಫಲಿತಾಂಶದ ಜೊತೆಗೆ ಗುಣಾತ್ಮಕ ಫಲಿತಾಂಶದಲ್ಲಿಯೂ ಮೊದಲ ಶ್ರೇಯಾಂಕವನ್ನು ಜಿಲ್ಲೆ ಗಳಿಸಬೇಕು. ಈ ಬಾರಿಯ ಶೈಕ್ಷಣಿಕ ಸಾಲಿನ ಆರಂಭದಿಂದಲೂ ಜಿಲ್ಲಾಡಳಿತ, ಶಾಲಾ ಶಿಕ್ಷಣ ಇಲಾಖೆಯ ಸಮನ್ವಯದೊಂದಿಗೆ ವಿದ್ಯಾರ್ಥಿಗಳಲ್ಲಿ ಕಲಿಕಾ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಉತ್ತೇಜಿಸುವ ಕ್ರಮಗಳನ್ನು ಕೈಗೊಂಡಿದ್ದು ಡಿಸೆಂಬರ್‌ನಲ್ಲಿಯೇ ಎಸ್‌ಎಸ್‌ಎಲ್‌ಸಿ ಪಠ್ಯ ಮುಕ್ತಾಯ ಗೊಂಡಿದೆ. ಪ್ರಸ್ತುತ ಪುನರ್‌ಮನನ, ಪುನರಾವರ್ತನೆ, ಚಟುವಟಿಕೆಗಳು, ಪೂರ್ವ ಸಿದ್ಧತಾ ಪರೀಕ್ಷೆಗಳು ನಡೆಯುತ್ತಿವೆ” ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರಕಾಶ್ ಜಿ.ಟಿ ನಿಟ್ಟಾಲಿ, ತೊಂಡೆಬಾವಿಯ ಎ.ಸಿ.ಸಿ. ಸಿಮೆಂಟ್ ಕಂಪನಿಯ ಮುಖ್ಯಸ್ಥ ಹಿತೇಶ್ ಗೊಯೆಲ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬೈಲಾಂಜನಪ್ಪ, ಜಿಲ್ಲಾ ಡಯಟ್ ಪ್ರಾಂಶುಪಾಲ ಮುನಿಕೆಂಪೇಗೌಡ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಪಾಲ್ಗೊಂಡಿದ್ದರು.