Chikkaballapur : ಚಿಕ್ಕಬಳ್ಳಾಪುರ ನಗರದಲ್ಲಿ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ (State High School Co-Teachers Association) ಚಿಕ್ಕಬಳ್ಳಾಪುರ ತಾಲ್ಲೂಕು ಘಟಕದ ನಾಮನಿರ್ದೇಶಿತ ಸದಸ್ಯರ (Nominated Members) ಪದಗ್ರಹಣ (Oath Taking) ಕಾರ್ಯಕ್ರಮ ಭಾನುವಾರ ನಡೆಯಿತು.
ತಾಲೂಕು ಘಟಕದ ಅಧ್ಯಕ್ಷ ಪಿ.ಎಂ. ಚಲಪತಿಗೌಡ ಮಾತನಾಡಿ, ಪದಾಧಿಕಾರಿಗಳು ವೈಯಕ್ತಿಕ ಹಿತಾಸಕ್ತಿಗೆ ಆದ್ಯತೆ ನೀಡದೆ ನಿಷ್ಪಕ್ಷಪಾತವಾಗಿ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಶಿಕ್ಷಕರ ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸುವ ನಿಟ್ಟಿನಲ್ಲಿ ಪ್ರೌಢಶಾಲಾ ಸಹಶಿಕ್ಷಕರ ಸಂಘ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದರು.
ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶಶಿಧರ್ ಮಾತನಾಡಿ, ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಸಹಕರಿಸಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಲಕ್ಷ್ಮಣರೆಡ್ಡಿ, ಕಾರ್ಯದರ್ಶಿ ಶ್ರೀನಾಥ್, ಖಜಾಂಚಿ ಕಿರಣ್ ಸಿಪಿ, ಹಾಗೂ ಶಿಕ್ಷಕರಾದ ಕೆ.ಆನಂದ್, ಗಂಗಾಧರ್, ಸಂತೋಷ್, ಪ್ರಶಾಂತ್, ಮತ್ತಿತರರು ಉಪಸ್ಥಿತರಿದ್ದರು.
ಪದಾಧಿಕಾರಿಗಳು: ಸಂಘದ ರಾಜ್ಯ ಪರಿಷತ್ ಸದಸ್ಯರಾಗಿ ಸಿ.ಶಿವಕುಮಾರ್, ಕೆ.ಎನ್.ರಮೇಶ್ ಬಾಬು, ಕೆ.ನಾಗರಾಜ್, ಸಂಘಟನಾ ಕಾರ್ಯದರ್ಶಿಗಳಾಗಿ ರಮೇಶ್, ಲೋಕೇಶ್, ಶ್ರೀನಿವಾಸ್, ಉಪಾಧ್ಯಕ್ಷರಾಗಿ ಆನಂದ್, ನಾಗವೇಣಿ, ಸಾಂಸ್ಕೃತಿಕ ಕಾರ್ಯದರ್ಶಿಗಳಾಗಿ ರವಿಕುಮಾರ್, ದಿನೇಶ್, ನಾಗೇಶ್, ಮಾಧ್ಯಮ ಕಾರ್ಯದರ್ಶಿಯಾಗಿ ಮಹಾಂತೇಶ್ ಕಟಾಪುರ, ಸಹ ಕಾರ್ಯದರ್ಶಿಗಳಾಗಿ ಕಾಸಿಂ ಸಾಹೇಬ್, ಕ್ರೀಡಾ ಕಾರ್ಯದರ್ಶಿಯಾಗಿ ದೇವರಾಜು ಪದಗ್ರಹಣ ಮಾಡಿದರು.









