Bagepalli : ಗುಡಿಬಂಡೆ ಪಟ್ಟಣ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯ ಸಂದರ್ಭದಲ್ಲಿ ಶಾಂತಿಯುತವಾಗಿ ಪ್ರತಿಭಟನೆ ಮಾಡುತ್ತಿದ್ದ ಕಾಂಗ್ರೆಸ್ ಮುಖಂಡರ ಮೇಲೆ Circle Inspector ಪ್ರಶಾಂತ್ ಅವರು ದರ್ಪ ತೋರಿದ್ದಾರೆ. ಅವರನ್ನು ಅಮಾನತು ಪಡಿಸುವಂತೆ ಆಗ್ರಹಿಸಿ, ಕಾಂಗ್ರೆಸ್ ಹಿರಿಯ ನಾಯಕರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ಮಾಡಲು ಮುಖಂಡರು, ಕಾರ್ಯಕರ್ತರು ಮುಂದಾಗಬೇಕು ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಕರೆ ನೀಡಿದರು.
ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಗುಡಿಬಂಡೆಯಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಸರ್ಕಲ್ ಇನ್‌ಸ್ಪೆಕ್ಟರ್ ಅವರು ಶಾಸಕ ಎಸ್.ಎನ್.ಸುಬ್ಬಾರೆಡ್ಡಿಗೆ ಅಗೌರವ ತಂದಿದ್ದರೆ, ಅವರ ವಿರುದ್ಧ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ನಂತರ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಮಾತನಾಡಿ, ‘ಜಿಲ್ಲಾಡಳಿತ, ಪೊಲೀಸ್ ಇಲಾಖೆಯ ಮೇಲೆ ನಮಗೆ ವಿಶ್ವಾಸ ಇದೆ. ಕಾಲಾವಕಾಶ ಒಳಗೆ ಸರ್ಕಲ್ ಇನ್‌ಸ್ಪೆಕ್ಟರ್ ಪ್ರಶಾಂತ್ ಅವರನ್ನು ಅಮಾನತು ಪಡಿಸದೇ ಇದ್ದರೆ, ನಂತರ ಕಾಂಗ್ರೆಸ್‌ನಿಂದ ಹೋರಾಟ ನಡೆಸಲಾಗುವುದು.’ ಎಂದು ಕಾರ್ಯಕರ್ತರಿಗೆ ಹೇಳಿದರು.
Follow Chikkaballapur District News
Facebook: https://www.facebook.com/hicbpur
Twitter: https://twitter.com/hicbpur