ತಲಕಾಯಲಬೆಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

- Advertisement -
- Advertisement -

Talakayalabetta, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ತಲಕಾಯಲಬೆಟ್ಟ ಗ್ರಾಮ ಪಂಚಾಯಿತಿಯ ಎರಡನೇ ಅವಧಿಗೆ ಅಧ್ಯಕ್ಷರಾಗಿ ವೆಂಕಟಸ್ವಾಮಿ ಹಾಗು ಉಪಾಧ್ಯಕ್ಷರಾಗಿ ಶುಭಾವತಿ ವೆಂಕಟೇಶ್ ಆಯ್ಕೆಯಾಗಿದ್ದಾರೆ.

ಒಟ್ಟು 14 ಸದಸ್ಯ ಬಲ ಹೊಂದಿರುವ ತಲಕಾಯಲಬೆಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷಸ್ಥಾನೆ ಎಸ್‌ಸಿ ಹಾಗು ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಎ ಮಹಿಳೆ ಮೀಸಲು ನಿಗದಿಪಡಿಸಲಾಗಿದ್ದು ಮಂಗಳವಾರ ಚುನಾವಣೆ ಪ್ರಕ್ರಿಯೆ ನಡೆಯಿತು.
ಅಧ್ಯಕ್ಷ ಸ್ಥಾನಕ್ಕೆ ಆಂಜಿನಪ್ಪ ಪುಟ್ಟು ಅವರ ಬಂಡಾಯ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ವೆಂಕಟಸ್ವಾಮಿ ಮತ್ತು ಕಾಂಗ್ರೆಸ್ ಬೆಂಬಲಿತ ವೆಂಕಟರೋಣಪ್ಪ ನಾಮಪತ್ರ ಸಲ್ಲಿಸಿದ್ದು, ಉಪಾಧ್ಯಕ್ಷ ಸ್ಥಾನಕ್ಕೆ ಶುಭಾವತಿ ವೆಂಕಟೇಶ್ ಮಾತ್ರ ನಾಮಪತ್ರ ಸಲ್ಲಿಸಿದ್ದರು.

ಅಧ್ಯಕ್ಷ ಸ್ಥಾನದ ಬಂಡಾಯ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ವೆಂಕಟಸ್ವಾಮಿ ೦೭ ಮತಗಳನ್ನು ಪಡೆದರೆ ಕಾಂಗ್ರೆಸ್ ಬೆಂಬಲಿತ ವೆಂಕಟರೋಣಪ್ಪ ೦೬ ಮತಗಳನ್ನು ಪಡೆದು ಪರಾಭವಗೊಂಡರು. ಒಂದು ಮತ ತಿರುಸ್ಕೃತಗೊಂಡಿದೆ. ಉಪಾಧ್ಯಕ್ಷ ಸ್ಥಾನದ ಶುಭಾವತಿ ವೆಂಕಟೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಗರಸಭೆ ಪೌರಾಯುಕ್ತ ಆರ್.ಶ್ರಿಕಾಂತ್ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು.

ಈ ಸಂದರ್ಭದಲ್ಲಿ ಸಹಾಯಕ ಚುನಾವಣಾಧಿಕಾರಿ ಹೆಚ್.ಸಿ.ಮುನಿರಾಜು, ಸದಸ್ಯರಾದ ಅಶ್ವತ್ಥನಾರಾಯಣರೆಡ್ಡಿ, ಸರಸ್ವತಮ್ಮ, ದ್ಯಾವಮ್ಮ, ಸಾವಿತ್ರಮ್ಮ, ಜಯಮ್ಮ, ಚಿಕ್ಕನರಸಿಂಹಪ್ಪ, ಶೋಭಾ, ಕೆ.ವಿ.ಮಂಜುನಾಥ್ ಮತ್ತಿತರರು ಹಾಜರಿದ್ದರು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!