Gudibande : ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಶಿಕ್ಷಕರ ದಿನಾಚರಣೆ ಸಮಿತಿವತಿಯಿಂದ ಬುಧವಾರ ಗುಡಿಬಂಡೆ ಪಟ್ಟಣದ ಸರಕಾರಿ ಪ್ರೌಢ ಶಾಲೆ ಆವರಣದಲ್ಲಿ ಶಿಕ್ಷಕರ ದಿನಾಚರಣೆ (Teachers’ Day) ಕಾರ್ಯಕ್ರಮ ಆಯೋಜಿಸಲಾಗಿತ್ತು. ಗುಡಿಬಂಡೆ ಪಟ್ಟಣದ ಮುಖ್ಯ ಬೀದಿಯಲ್ಲಿ ಬೆಳ್ಳಿಯ ಪಲ್ಲಕ್ಕಿಯಲ್ಲಿ ಡಾ.ಎಸ್.ರಾಧಕೃಷ್ಣನ್ (Sarvepalli Radhakrishnan) ಅವರ ಭಾವಚಿತ್ರವನ್ನು ಮೆರವಣಿಗೆ ನಡೆಸಲಾಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ (S N Subbareddy) “ಇತ್ತಿಚಿಗೆ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದು ಅವುಗಳ ಅನುಷ್ಠಾನಕ್ಕೆ ಶಿಕ್ಷಕರನ್ನು ಬಳಕೆ ಮಾಡಿಕೊಳ್ಳುತ್ತಿರುವುದರಿಂದ ಅವರಿಗೆ ಒತ್ತಡ ಹೆಚ್ಚಾಗಿ ಸರಿಯಾದ ರೀತಿಯಲ್ಲಿ ತರಗತಿ ನಡೆಸಲು ಸಾಧ್ಯವಾಗುತ್ತಿಲ್ಲ ಆದ್ದರಿಂದ ಸರ್ಕಾರ ಶಿಕ್ಷಕರ ಮೇಲಿರುವ ಒತ್ತಡ ಕಡಿಮೆ ಮಾಡಬೇಕು. ಶಿಕ್ಷಕರ ಗಮನದಲ್ಲಿಟ್ಟುಕೊಂಡು ಸರ್ಕಾರ 7ನೇ ವೇತನ ಆಯೋಗ ಜಾರಿಮಾಡಬೇಕು ಅಥವಾ ಕೇಂದ್ರ ಸರ್ಕಾರ ವೇತನ ಮಾದರಿಯ ವೇತನ ಜಾರಿ ಮಾಡಬೇಕೆಂದು ಸದನದಲ್ಲಿ ಪ್ರಸ್ತಾಪಿಸುತ್ತೇನೆ” ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಉತ್ತಮ ಶಿಕ್ಷಕರ ಪ್ರಶಸ್ತಿ ಪಡೆದ ಶಿಕ್ಷಕರನ್ನು ಹಾಗೂ ನಿವೃತ್ತಿಹೊಂದಿದ ಶಿಕ್ಷಕರನ್ನು ಸನ್ಮಾನಿಸಿ, ಶಿಕ್ಷಕರ ಕ್ರೀಡಾಕೂಟದಲ್ಲಿ ವಿಜೇತರಾದ ಶಿಕ್ಷಕರಿಗೆ ಬಹುಮಾನ ಮತ್ತು ಅಭಿನಂದಾನ ಪತ್ರ ವಿತರಿಸಲಾಯಿತು.
ತಹಶೀಲ್ದಾರ್ ಸಿಗ್ಬತ್ ವುಲ್ಲಾ, ಕ್ಷೇತ್ರ ಶಿಕ್ಷಣಾಧಿಕಾರಿ ಮುನೇಗೌಡ, ಪ.ಪಂ.ಮುಖ್ಯಾಧಿಕಾರಿ ರಾಜಶೇಖರ್ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ನಾರಾಯಣಸ್ವಾಮಿ, ನೌಕರರ ಸಂಘದ ತಾಲೂಕು ಅಧ್ಯಕ್ಷ ಕೆ.ವಿ.ನಾರಾಯಣಸ್ವಾಮಿ, ಪ.ಪಂ ಅಧ್ಯಕ್ಷೆ ಬಷೀರಾ ರಿಜ್ವಾನ್, ಉಪಾಧ್ಯಕ್ಷ ಅನಿಲ್ ಕುಮಾರ್, ಮುಖ್ಯಾಧಿಕಾರಿ ರಾಜಶೇಖರ್, ಕ.ಸಾ.ಪ ತಾಲೂಕು ಅಧ್ಯಕ್ಷ ಸುಬ್ಬರಾಯಪ್ಪ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಲಕ್ಷ್ಮೀನರಸಿಂಹಗೌಡ, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಾಲಾಜಿ, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಆರ್.ಅಶ್ವತ್ಥಪ್ಪ, ಸೇರಿ ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ಶಾಲಾ ಶಿಕ್ಷಕರ ಸಂಘಗಳ ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.