Sunday, October 2, 2022
HomeSidlaghattaಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರಿಗೆ ಗೌರವ

ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರಿಗೆ ಗೌರವ

- Advertisement -
- Advertisement -
- Advertisement -
- Advertisement -

Handiganala, Sidlaghatta : ಶಿಡ್ಲಘಟ್ಟ ನಗರದ ಹೊರವಲಯದ ಹಂಡಿಗನಾಳ ಗ್ರಾಮದ ಬಳಿಯಿರುವ ಕೆ.ವಿ.ಭವನದಲ್ಲಿ ಸೋಮವಾರ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಭಾರತರತ್ನ ಡಾ.ಎಸ್.ರಾಧಾಕೃಷ್ಣನ್‌ರವರ (Sarvepalli Radhakrishnan) ಜನ್ಮದಿನೋತ್ಸವ ಹಾಗೂ ಶಿಕ್ಷಕರ ದಿನಾಚರಣೆ (Teachers Day) ಕಾರ್ಯಕ್ರಮದಲ್ಲಿ ಮುಖ್ಯಭಾಷಣಕಾರರಾಗಿ ಭಾಗವಹಿಸಿ ಉಪನ್ಯಾಸಕ ಮುನಿರೆಡ್ಡಿ ಅವರು ಮಾತನಾಡಿದರು.

ಶಿಕ್ಷಣ ಕ್ಷೇತ್ರದಿಂದ ಸಮಾಜದಲ್ಲಿ ಪರಿವರ್ತನೆ ಹಾಗೂ ಅಭಿವೃದ್ದಿ ಸಾಧ್ಯವಾಗುತ್ತದೆ. ಮಕ್ಕಳನ್ನು ಸಮಾಜದ ಉತ್ತಮ ಪ್ರಜೆಗಳನ್ನಾಗಿಸುವಲ್ಲಿ ಗುರುಗಳ ಪಾತ್ರ ಮಹತ್ವದ್ದಾಗಿದೆ. ಗುರುಕುಲ ಶಿಕ್ಷಣದಿಂದ ಹಿಡಿದು ಇಂದಿನ ಶಿಕ್ಷಣದವರೆಗೂ ಶಿಕ್ಷಕರು ಇತರರ ಜೀವನವನ್ನು ರೂಪಿಸಲು ತಮ್ಮನ್ನು ತಾವು ಅರ್ಪಿಸಿಕೊಳ್ಳುತ್ತಿದ್ದಾರೆ. ಸಮಾಜದಲ್ಲಿ ಅತಿ ಹೆಚ್ಚು ಗೌರವ ಹಾಗೂ ಘನತೆಗೆ ಪಾತ್ರವಾಗಿರುವ ಶಿಕ್ಷಣ ವ್ಯವಸ್ಥೆಯನ್ನು ಹಾಗೂ ಶಿಕ್ಷಕರನ್ನು ಪ್ರತಿಯೊಬ್ಬರು ಗೌರವಿಸಬೇಕು ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ರಘುನಾಥರೆಡ್ಡಿ ಮಾತನಾಡಿ, ಭಾರತರತ್ನ ಡಾ.ಸರ್ವೇಪಲ್ಲಿ ರಾಧಾಕೃಷ್ಣನ್ ಅವರು ಪ್ರತಿಯೊಬ್ಬ ಶಿಕ್ಷಕರಿಗೆ ಆದರ್ಶ ಹಾಗೂ ಬಡತನದ ನಡುವೆಯೂ ಅವರು ಮಾಡಿದ ಅಪಾರವಾದ ಸಾಧನೆಗಳೇ ಪ್ರೇರಣೆಯಾಗಬೇಕು ಎಂದರು.

ಈ ಸಂದರ್ಭದಲ್ಲಿ ನಿವೃತ್ತರಾದ 30 ಮಂದಿ ಶಿಕ್ಷಕರು ಸೇರಿದಂತೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದಿರುವ ಮೂವರು ಶಿಕ್ಷಕರನ್ನು ಗೌರವಿಸಲಾಯಿತು.

ತಹಶೀಲ್ದಾರ್ ಬಿ.ಎಸ್.ರಾಜೀವ್, ತಾಲ್ಲೂಕು ಪಂಚಾಯಿತಿ ಇಓ ಮುನಿರಾಜು, ನಗರಸಭೆ ಪೌರಾಯುಕ್ತ ಆರ್.ಶ್ರೀಕಾಂತ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಎನ್.ಸುಬ್ಬಾರೆಡ್ಡಿ, ಹಂಡಿಗನಾಳ ಗ್ರಾಮ ಪಂಚಾಯಿತಿ ಅಧ್ಯಕ್ಷ ಮುನಿರೆಡ್ಡಿ, ಕೋಚಿಮುಲ್ ನಿರ್ದೇಶಕ ಆರ್.ಶ್ರೀನಿವಾಸ್, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬಿ.ಸಿ.ನಂದೀಶ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮುನಿರಾಜು ಹಾಜರಿದ್ದರು.

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶
https://www.youtube.com/c/sidlaghatta

Website 🌐
http://www.sidlaghatta.com

📱 Join Telegram
https://t.me/Sidlaghatta

0.00 avg. rating (0% score) - 0 votes
- Advertisement -
RELATED ARTICLES
- Advertisment -

Most Popular

error: Content is protected !!